ರಾಜ್ಯದಲ್ಲಿರೋದು ಸಿದ್ರಮುಲ್ಲಾಖಾನ್ ಸರ್ಕಾರ: ವಿಧಾನಸೌಧ ಇರೋದು ನಮಾಜ್ ‌ಮಾಡೋದಕ್ಕಾ?: ನಿಮ್ಮ ಗ್ಯಾರಂಟಿಗಳು ಸಾಕು. ಹಿಂದೂಗಳಿಗೆ ಜೀವದ ಗ್ಯಾರಂಟಿ ನೀಡಿ- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಕಲಾಪದಲ್ಲಿ ಕಾಂಗ್ರೆಸ್ ಎಂ ಎಲ್ ಸಿ ಓರ್ವ ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಿ ಎಂದು ಕೇಳ್ತಾರೆ. ಏಕೆ ಕೇಳುತ್ತಾರೆ ಎಂದರೆ ಈಗ ಇರುವುದು ಸಿದ್ರಾಮುಲ್ಲಾಖಾನ್ ಸರ್ಕಾರ. ಕಾಂಗ್ರೆಸ್ ಸರ್ಕಾರದ ನೀತಿಯೇ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಬಳಿಯುವುದು ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ನಡೆಸಿದರು.

ನಗರದ ಡಿಪಿವಿ ಕಲ್ಯಾಣ ಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಈ ಹಿಂದೆ ನಮ್ಮ ಪರಮೋಚ್ಛ ನಾಯಕ ಅಟಲ್ ಬಿಹಾರಿ ವಾಜಪೇಯಿ ಅಂತವರೆ ಸೋತಿದ್ದರು. 2023ರ ವಿಧಾನಸಭಾ ಚುನಾವಣಾ ಸೋಲಿನಿಂದ ನಾವು ಎದೆಗುಂದ ಬೇಕಿಲ್ಲ. ಯಾವುದೇ ಸರ್ಕಾರ ಬಂದರೂ ಕನಿಷ್ಠ ಆರು ತಿಂಗಳು ಸರಿಯಾಗಿರುತ್ತದೆ. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಎರಡೇ ತಿಂಗಳಲ್ಲಿ ದ್ವಂದ್ವ, ಮುಸಿಕಿನ ಗುದ್ದಾಟ ಆರಂಭವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಘೋಷಿಸಿರುವ ಐದು ಗ್ಯಾರಂಟಿಗಳು ಪ್ರಧಾನಿ ಮೋದಿಯವರು ಮತ್ತೊಂದು ರೂಪದಲ್ಲಿ ನೀಡಿದ್ದಾರೆ. ಚುನಾವಣೆಗೂ ಮುನ್ನಾ ಎಲ್ಲಾರಿಗೂ ಉಚಿತ ಅಂತಾ ಹೇಳಿ ಈಗ ಪ್ರತಿಯೊಂದಕ್ಕೂ ಕಂಡಿಷನ್ ಹಾಕುತ್ತಿದ್ದಾರೆ. ನಿಮ್ಮ ಗ್ಯಾರಂಟಿಗಳು ಸಾಕಾಗಿದೆ. ನಮಗೀಗ ಹಿಂದುತ್ವದ ಪರ ಹೋರಾಡುವವರನ್ನು ಬದುಕುವಂತೆ ಮಾಡಿ ಎಂದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಬದುಕುವ ಹಕ್ಕು ಕೂಡ ಇಲ್ಲದಂತಾಗಿದೆ. ಇದ್ದಿದ್ದರೆ ಜೈನ ಮುನಿ ಹತ್ಯೆ ಆಗುತ್ತಿರಲಿಲ್ಲ. ಹೀಗಾಗಿ ನಮಗೆ ಮೊದಲು ಬದುಕುವ ಗ್ಯಾರಂಟಿ ನೀಡಿ ಎಂದು ಆಗ್ರಹಿಸಿದರು.

ಲೋಕಸಭಾ ಚುನಾವಣೆ ದೇಶವನ್ನು ನಡೆಸುವ ಚುನಾವಣೆ

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದ ಆರ್ಥಿಕತೆ ಸುಧಾರಿಸಿದೆ. ಬಿಹಾರದ ಪಾಟ್ನಾದಲ್ಲಿ ನರಿಗಳೆಲ್ಲಾ ಒಂದೆಡೆ ಸೇರಿ ಮೋದಿಯನ್ನು ಸೋಲಿಸಲು ಒಂದಾಗಿದ್ದಾರೆ. ಮುಂದೆ ಬೆಂಗಳೂರಿನಲ್ಲಿಯೂ ನರಿಬುದ್ದಿಯವರೆಲ್ಲಾ ಸೇರಲು ನಿರ್ಧರಿಸಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಬೂತ್ ಮಟ್ಟದಲ್ಲಿ ಜಯಶೀಲರಾಗುವುದನ್ನು ರೂಢಿಸಿಕೊಳ್ಳಬೇಕು. ಬೂತ್ ಗೆದ್ದರೆ ಚುನಾವಣೆ ಗೆದ್ದಂತೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ ಕಾರ್ಯಕರ್ತರ ಶಕ್ತಿಯೇ ಬಿಜೆಪಿ ಶಕ್ತಿ, ಚುನಾವಣಾ ಸಂದರ್ಭದಲ್ಲಿ ಮಾತ್ರ ಜನ, ಕಾರ್ಯಕರ್ತರು, ಮುಖಂಡರ ಜೊತೆ ಇರದೇ ಚುನಾವಣೆ ನಂತರವೂ ಜೊತೆಗಿರುವ ಏಕೈಕ ಪಕ್ಷ ಬಿಜೆಪಿ ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದ ರೀತಿಯಲ್ಲೇ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ದೊಡ್ಡಬಳ್ಳಾಪುರದಿಂದ ಕನಿಷ್ಠ ಒಂದೂವರೆ ಲಕ್ಷ ಮತಗಳನ್ನು ನೀಡಿ ಗೆಲ್ಲಿಸಬೇಕು, ರಾಜ್ಯದಿಂದ ಕನಿಷ್ಠ 26‌ ಸೀಟುಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ನಾವು ಬೂತ್ ಮಟ್ಟದಿಂದ ಪಕ್ಷವನ್ನ ಸಂಘಟಿಸಬೇಕು ಎಂದು ತಿಳಿಸಿದರು.

ನಾವು ಪ್ರಸ್ತುತ ಸುವರ್ಣಘಳಿಗೆಯಲ್ಲಿದ್ದೇವೆ ಮುಂದಿನ ದಿನಗಳಲ್ಲಿ ಪ್ರತಿ ಗ್ರಾ.ಪಂ, ತಾ.ಪಂ, ಜಿ.ಪಂ ಚುನಾವಣೆ ಸೇರಿದಂತೆ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನ ಗೆಲ್ಲಿಸಿ ದೇಶ ಉಳಿಸಬೇಕು. ಜಿಲ್ಲಾಡಳಿತ, ತಾಲೂಕಾಡಳಿತ, ವಿವಿಧ ಇಲಾಖೆಗಳಡಿಯಲ್ಲಿ ಬರುವ ಕೆಲಸ ಕಾರ್ಯ, ಯೋಜನೆಗಳ ಸೌಲಭ್ಯಗಳನ್ನು ಕಾರ್ಯಕರ್ತರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಮಾತನಾಡಿ, 70 ವರ್ಷಗಳ ನಂತರ 140 ಕೋಟಿ ಜನಕ್ಕೆ ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ತಲುಪಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಆದ್ದರಿಂದ ಮತ್ತೊಮ್ಮೆ ಮೋದಿಯವರನ್ನು ಗೆಲ್ಲಿಸಿ ಪ್ರಧಾನಿಯನ್ನಾಗಿಸಿ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ಈ ವೇಳೆ ಮಾಜಿ ಶಾಸಕ ಚಂದ್ರಣ್ಣ, ಮುಖಂಡರಾದ ಕೆ.ಎಂ.ಹನುಮಂತರಾಯಪ್ಪ, ಸಪ್ತಗಿರಿ ನಾಯಕ್, ವಿನಯ್, ನಗರಸಭೆ ಅಧ್ಯಕ್ಷೆ ಸುಧಾರಣಿ ಲಕ್ಷ್ಮೀನಾರಾಯಣ್, ವತ್ಸಲಾ, ಗೋಪಿನಾಥ್, ತಾಲ್ಲೂಕು ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಪ್ಪ, ಬಂತಿ ವೆಂಕಟೇಶ್ ಮತ್ತಿತರರು ಇದ್ದರು.

Ramesh Babu

Journalist

View Comments

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

2 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

14 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

18 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

21 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

23 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago