ರಾಜ್ಯದಲ್ಲಿ ಒಟ್ಟು 14.21 ಲಕ್ಷ ರೈತರ ಬೆಳೆ ಹಾನಿ- ಸಿಎಂ‌ ಸಿದ್ದರಾಮಯ್ಯ

ನೂತನವಾಗಿ ಘೋಷಣೆಯಾಗಿರುವ ಯಡ್ರಾಮಿ ತಾಲ್ಲೂಕಿನಲ್ಲಿ, ಜೇವರ್ಗಿ ಮತಕ್ಷೇತ್ರದಲ್ಲಿ ₹867.49 ಕೋಟಿ ವೆಚ್ಚದ 87 ಕಾಮಗಾರಿಗಳ ಶಂಕುಸ್ಥಾಪನೆ, ₹38.29 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿದೆ. ಒಟ್ಟಾರೆ 906 ಕೋಟಿ ರೂ.ಗಳ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಸಮಾರಂಭದಲ್ಲಿ  ಅವರು ಮಾತನಾಡಿದರು.

ವಿರೋಧಪಕ್ಷದವರು ರಾಜಕಾರಣಕ್ಕಾಗಿ ಸುಳ್ಳನ್ನೇ ಅವಲಂಬಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರದಲ್ಲಿ ಅನುದಾನವಿಲ್ಲ ಎಂದು ಎಲ್ಲೆಡೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ದಿವಾಳಿಯಾಗಿದ್ದರೆ ಜೇವರ್ಗಿ ಮತಕ್ಷೇತ್ರ ಒಂದರಲ್ಲಿ ₹906 ಕೋಟಿ ವೆಚ್ಚ ಮಾಡಲಾಗುತ್ತಿರಲಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷದ 12 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ವೆಚ್ಚ ಮಾಡಲಾಗಿದೆ. ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಯಂತೆ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಾವು ಸರ್ಕಾರ ನುಡಿದಂತೆ ನಡೆಯುವವರು ಎಂದು ತಿಳಿಸಿದರು.

ಈ ಚುನಾವಣೆಯಲ್ಲಿ ನಮ್ಮ ಪಕ್ಷದ ವತಿಯಿಂದ 592 ಭರವಸೆಗಳನ್ನು ನೀಡಲಾಗಿತ್ತು. 243 ಭರವಸೆಗಳನ್ನು ಈಡೇರಿಸಲಾಗಿದೆ. ಉಳಿದ ಅವಧಿಯಲ್ಲಿ ಮಿಕ್ಕ ಭರವಸೆಗಳನ್ನು ಈಡೇರಿಸಲಾಗುವುದು.
ಬಿಜೆಪಿ 2018 ರಿಂದ ಅಧಿಕಾರದಲ್ಲಿದ್ದು, ಅವರು ನೀಡಿದ್ದ 600 ಭರವಸೆಗಳಲ್ಲಿ 10% ಭರವಸೆಗಳನ್ನು ಕೂಡ ಈಡೇರಿಸಿರಲಿಲ್ಲ ಎಂದರು.

ರಾಜ್ಯದಲ್ಲಿ 63 ಹೊಸ ತಾಲೂಕುಗಳನ್ನು ಘೋಷಣೆ ಮಾಡಲಾಗಿತ್ತು. ಬಿಜೆಪಿ‌ಯವರು 2018 ರಿಂದ 2023 ರವರೆಗೆ ನೂತನ ತಾಲ್ಲೂಕುಗಳಲ್ಲಿ ಕೇವಲ 14 ಕಡೆ ಮಾತ್ರ ತಾಲ್ಲೂಕು ಆಡಳಿತ ಕಚೇರಿ ನಿರ್ಮಾಣ ಮಾಡಿದ್ದರು. 2023ರಲ್ಲಿ ನಾವು ಅಧಿಕಾರಕ್ಕೆ ಬಂದ ನಂತರ 49 ತಾಲ್ಲೂಕುಗಳಲ್ಲಿ ಕೂಡ ಪ್ರಜಾಸೌಧಗಳನ್ನು ಮಂಜೂರು ಮಾಡಿದ್ದು, ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ನಮ್ಮ ಸರ್ಕಾರದಲ್ಲಿ 17 ತಾಲ್ಲೂಕುಗಳು ಮಂಜೂರಾಗಿದ್ದು, 97 ನಾಡ ಕಚೇರಿಗಳು ಮಂಜೂರಾಗಿವೆ. ಕಲ್ಯಾಣ ಕರ್ನಾಟಕದಲ್ಲಿ 39 ಕಚೇರಿಗಳನ್ನು ಮಂಜೂರು ಮಾಡಲಾಗಿದೆ. ಎರಡನೇ ಹಂತದಲ್ಲಿ 53 ನಿರ್ಮಾಣವಾಗಿವೆ. ಕಲ್ಯಾಣ ಕರ್ನಾಟಕದ 25 ತಾಲ್ಲೂಕುಗಳಲ್ಲಿ ನಾಡ ಕಚೇರಿಗಳನ್ನು ನಮ್ಮ ಸರ್ಕಾರ ಮಂಜೂರು ಮಾಡಿದೆ ಎಂದರು.

ಈ ಬಾರಿ ಮಳೆ ಹೆಚ್ಚಾಗಿ ಬೆಳೆ ಹಾನಿಯಾಗಿರುವುದರಿಂದ ವೈಮಾನಿಕ ಸಮೀಕ್ಷೆ ಕೈಗೊಂಡು ಪರಿಶೀಲಿಸಿ ಪರಿಹಾರ ಕೊಡಲು ನಿರ್ಧರಿಸಿ ಎಸ್ ಡಿ.ಆರ್.ಎಫ್ ನಿಂದ 1,218 ಕೋಟಿ ಜೊತೆಗೆ ಸರ್ಕಾರದ ವತಿಯಿಂದ ಒಟ್ಟು 1,031ಕೋಟಿ ಹೆಚ್ಚುವರಿಯಾಗಿ ಒದಗಿಸಲಾಗಿದೆ. ರಾಜ್ಯದಲ್ಲಿ ಒಟ್ಟು 14.21 ಲಕ್ಷ ರೈತರ ಬೆಳೆ ಹಾನಿಯಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ 7,21,786 ರೈತರ ಬೆಳೆ ಹಾನಿಗೊಳಗಾಗಿದೆ. 1,072 ಕೋಟಿ ಬೆಳೆ ಹಾನಿಗೆ ಪರಿಹಾರ ನೀಡಿದೆ ಎಂದು ಹೇಳಿದರು.

ಕಲಬುರ್ಗಿ ಜಿಲ್ಲೆಯಲ್ಲಿ 3,23,318 ರೈತರ ಬೆಳೆ ಹಾನಿಯಾಗಿದ್ದು, ₹498 ಕೋಟಿ ಪರಿಹಾರ ನೀಡಲಾಗಿದೆ. ರೈತರ ಖಾತೆಗಳಿಗೆ ಈ ಹಣವನ್ನು ತಲುಪಿಸುವ ಕೆಲಸ ಮಾಡಿದ್ದೇವೆ. ರೈತರ ಸಹಾಯಕ್ಕೆ ಸರ್ಕಾರ ಸದಾ ಮುಂದಾಗಿದೆ. ನೆಟೆ ರೋಗಕ್ಕೆ ತುತ್ತಾದ ತೊಗರಿ ಬೆಳೆಗೆ 233 ಕೋಟಿ ರೂ. ಪರಿಹಾರ ಒದಗಿಸಲಾಗಿದೆ. ಕಬ್ಬಿನ ಬೆಲೆ ಕಡಿಮೆ ಎಂದು ರೈತರು ಪ್ರತಿಭಟಿಸಿದಾಗ ಅವರ ನೆರವಿಗೆ ಸರ್ಕಾರ ಧಾವಿಸಿ ಸರ್ಕಾರದಿಂದ ₹50 ಹಾಗೂ ಕಾರ್ಖಾನೆಯಿಂದ 50 ರೂ. ನಿಗದಿ ಮಾಡಿ 300 ಕೋಟಿಗಳನ್ನು ಸರ್ಕಾರದಿಂದ ಕಬ್ಬಿನ ಬೆಳೆಗಾರರಿಗೆ ನೀಡಲಾಗಿದೆ ಎಂದರು.

ಬಿಜೆಪಿಯ ಗೃಹ ಸಚಿವ ಹಾಗೂ ಉಪಪ್ರಧಾನಿಯಾಗಿದ್ದ ಅಡ್ವಾಣಿ ಯವರು 371ಜೆ ಜಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇದನ್ನು ಜಾರಿ ಮಾಡಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಂ ಸಿಂಗ್ ಹೋರಾಟದಿಂದ ಇದು ಸಾಧ್ಯವಾಯಿತು. ಇದರಿಂದಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆಯಾಯಿತು. ₹13,000 ಕೋಟಿ ಗಳನ್ನು ಮೂರು ವರ್ಷಗಳಲ್ಲಿ ಒದಗಿಸಲಾಗಿದ್ದು, ಈ ವರ್ಷದಲ್ಲಿ 3,000 ಕೋಟಿ ಒದಗಿಸಲಾಗಿದೆ ಎಂದು ಹೇಳಿದರು.

ಕೆಕೆಆರ್‌ಡಿಬಿ ಅನುದಾನವನ್ನು ಪೂರ್ಣವಾಗಿ ವೆಚ್ಚ ಮಾಡಬೇಕು. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಅಜಯ್ ಸಿಂಗ್ ಅವರಿಗೆ ತಿಳಿಸಲಾಗಿತ್ತು. ಅದರಂತೆ 300 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ. ರಾಜ್ಯದಲ್ಲಿ ಒಟ್ಟು 900 ರಾಜ್ಯಕ್ಕೆ ಕೆಪಿಎಸ್ ಮಂಜೂರಾಗಿದೆ ಎಂದರು.

ಅಸಮಾನತೆ ಹೋಗಲಾಡಿಸಲು ನಂಜುಂಡಪ್ಪ ಅವರ ವರದಿಯನ್ನು ಆಧರಿಸಿ ಶಿಫಾರಸ್ಸುಗಳನ್ನು ಜಾರಿಗೆ ತರಲಾಗಿದೆ. ಇದರ ಪರಿಣಾಮಗಳ ಬಗ್ಗೆ ವರದಿ ಸಲ್ಲಿಸಲು ಗೋವಿಂದ ರಾವ್ ಸಮಿತಿ ರಚಿಸಲಾಗಿದೆ. ಶೀಘ್ರದಲ್ಲಿ ವರದಿಯ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

11 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

11 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

17 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

18 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 day ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

1 day ago