ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರ ಆಶೋತ್ತರ, ಸಮಸ್ಯೆಗಳಿಗೆ ಪರಿಹರ ನೀಡುವಲ್ಲಿ ವಿಫಲವಾಗುತ್ತಿದೆ. ಕಾಂಗ್ರೆಸ್ ಸರ್ಕಾರವು ಒಂದು ರೀತಿಯಲ್ಲಿ ಡಿಸ್ಕೋ ಡ್ಯಾನ್ಸ್ ಆಡುತ್ತಿದೆ. ಅನ್ನದಾತರು ಬೆಳೆ ಬೆಳೆಯಲು ಕನಿಷ್ಠ ಎರಡು ತಾಸು ವಿದ್ಯುತ್ ಸಹ ನೀಡಲು ಸರ್ಕಾರ ಕೈಯಲ್ಲಿ ಆಗುತ್ತಿಲ್ಲ, ಉಚಿತ ಗ್ಯಾರೆಂಟಿ ಯೋಜನೆಗಳು ಜನರನ್ನ ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಕೇವಲ ಆರ್ಭಟದ ಅಧಿಕಾರ ನಡೆಯುತ್ತಿದೆ ಅಷ್ಟೇ, ಇದಕ್ಕೆಲ್ಲಾ ಎಂಪಿ ಚುನಾವಣೆಯಲ್ಲಿ ಜನರಿಂದ ಉತ್ತರ ಪಡೆಯಲಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ ಹರೀಶ್ ಗೌಡ ಅವರು ಕಿಡಿಕಾರಿದರು.
ಕುಮಾರಸ್ವಾಮಿ ಅವರು ಸಾಲಮನ್ನಾ ಮಾಡಿದ್ದಾರೆ, ಜನ ಅದನ್ನ ಗಮನಿಸಲಿಲ್ಲ, ಆದರೂ ಜನಸೇವೆ ಮಾಡುವುದನ್ನ ಯಾವುದೇ ಕಾರಣಕ್ಕೂ ನಮ್ಮ ಪಕ್ಷ ನಿಲ್ಲಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮೆಚ್ಚಿ ಎನ್ ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕಳ್ಳಲಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು, ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಅವಲೋಕಿಸಿ ಸರ್ಕಾರದ ವತಿಯಿಂದ ಬರ ಪರಿಹಾರ ಕೊಡಿಸುವಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ ಎಂದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನ ತಳ ಮಟ್ಟದಿಂದ ಬಲಪಡಿಸಲು ಸತತ ಪ್ರಯತ್ನ ಮಾಡಲಾಗುವುದು, ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಸದೃಢವಾಗಿದೆ. ಇನ್ನಷ್ಟು ಗಟ್ಟಿಗೊಳಿಸಲು ಎಲ್ಲಾ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಕೆಲಸ ಮಾಡಲಾಗುವುದು, ಪಕ್ಷ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದರು.
ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯನವರು ಈ ತಾಲೂಕಿನಲ್ಲಿ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ಎಲ್ಲಿ ಏನು ಸಮಸ್ಯೆ ಇದೆ ಎಂಬುದು ಗೊತ್ತಿದೆ. ಅದನ್ನ ಎಲ್ಲರ ಗಮನಕ್ಕೆ ತಂದು ತಾಲೂಕಿನ ಅಭಿವೃದ್ಧಿಗೆ ಕೈಜೋಡಿಸಬೇಕು. ಕೇವಲ ಅಧಿಕಾರ ಇದ್ದರೆ ಮಾತ್ರ ತಾಲೂಕಿನ ಅಭಿವೃದ್ಧಿ ಬಗ್ಗೆ ಯೋಚನೆ ಮಾಡುವುದಲ್ಲ, ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.
ಹಾಲಿ ಶಾಸಕ ಧೀರಜ್ ಮುನಿರಾಜ್ ಅವರು ಕ್ಷೇತ್ರ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಪರಿಶೀಲಿಸಿ ಅಂಕಿಅಂಶಗಳನ್ನ ಸರ್ಕಾರ ಗಮನಕ್ಕೆ ತಂದು ಸೂಕ್ತ ಪರಿಹಾರ ಒದಗಿಸುವಲ್ಲಿ ಕೆಲಸ ನಿರ್ವಹಿಸಬೇಕು, ನಗರ ಹಾಗೂ ಗ್ರಾಮೀಣ ಭಾಗದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಪರಿಹಾರ ನೀಡುವಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸಲಹೆ ನೀಡಿದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…