ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿರುವ ಬೆನ್ನೆಲ್ಲೆ ಸಿಎಂ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿಂದು ಹಿರಿಯ ಅಧಿಕಾಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.
ಸಭೆ ನಡೆಸಿ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಮರೋಪಾಧಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಜೂನ್ 12ರ ಸೋಮವಾರ ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ. ರಾಜ್ಯದ ಹಲವೆಡೆ ಉಂಟಾಗಿರುವ ಕುಡಿಯುವ ನೀರಿನ ಅಭಾವದ ಕುರಿತ ಸಮಾಲೋಚನೆ ನಡೆಸಲಿದ್ದಾರೆ.
ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು, ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.