ಜನರೇ ವಿದ್ಯುತ್ ಉತ್ಪಾದಿಸಿ ಬಳಸಲು ಉತ್ತೇಜನ ನೀಡುವ ಕುಸುಮ್-ಎ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ್) ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಉದ್ದೇಶಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಕಡೂರು ಪಟ್ಟಣದ ಟಿಎಪಿಸಿಎಂಎಸ್ ಕಚೇರಿ ಆವರಣದಲ್ಲಿ ಮಂಗಳವಾರ ಟಿಎಪಿಸಿಎಂಎಸ್‌ನ ಅಮೃತ ಮಹೋತ್ಸವ ಹಾಗೂ ರೈತ ಬಜಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಈಗಾಗಲೇ ರಾಜ್ಯದಲ್ಲಿ ಕುಸುಮ್- ಬಿ (ರೈತರಿಗೆ ಸೋಲಾರ್ ಕೃಷಿ ಪಂಪ್ ಸೆಟ್) ಮತ್ತು ಕುಸುಮ್-ಸಿ (ಕೃಷಿ ಫೀಡರ್ ಗಳ ಸೌರೀಕರಣ) ಯೋಜನೆ ಅನುಷ್ಠಾನದಲ್ಲಿದೆ. ಇದರೊಂದಿಗೆ ಕುಸುಮ್- ಎ ಯೋಜನೆಯನ್ನೂ ಜಾರಿಗೊಳಿಸುವ ಕುರಿತು ಯೋಚಿಸಲಾಗಿದೆ”, ಎಂದರು.
“ಕುಸುಮ್- ಎ ಯೋಜನೆಯಡಿ ರೈತರು, ರೈತರ ಗುಂಪುಗಳು, ಸಹಕಾರಿ ಸಂಸ್ಥೆಗಳು, ಪಂಚಾಯತ್‌ಗಳು, ರೈತ ಉತ್ಪಾದಕರ ಸಂಸ್ಥೆಗಳು, ನೀರು ಬಳಕೆದಾರರ ಸಂಘಗಳು ವಿದ್ಯುತ್ ಉಪ ಕೇಂದ್ರಗಳಿಂದ 5 ಕಿ.ಮೀ. ಒಳಗೆ 500 ಕಿಲೋ ವ್ಯಾಟ್ ನಿಂದ ಗರಿಷ್ಠ 2 ಮೆಗಾ ವ್ಯಾಟ್ ವರೆಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಬಹುದು. ಅಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ಅವರೇ ಬಳಸಿಕೊಳ್ಳಬಹುದು. ಹೆಚ್ಚುವರಿ ವಿದ್ಯುತ್ತನ್ನು ಸರ್ಕಾರ ಖರೀದಿಸುತ್ತದೆ. ಇದರಿಂದ ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗುತ್ತದೆ. ರೈತರಿಗೂ ಆದಾಯ ಬರುತ್ತದೆ. ಈ ಹಿನ್ನೆಲೆಯಲ್ಲಿ ಕುಸುಮ್- ಎ ಯೋಜನೆ ಜಾರಿಗೊಳಿಸುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು”, ಎಂದು ತಿಳಿಸಿದರು.
“ರೈತರಿಗೆ ಸಬ್ಸಿಡಿ ಮೂಲಕ ಸೋಲಾರ್ ಪಂಪ್ ಸೆಟ್ ನೀಡುವ ಕುಸುಮ್- ಬಿ ಯೋಜನೆ ಈಗಾಗಲೇ ಜಾರಿಯಲ್ಲಿದೆ. ರೈತರು ಬೋರ್ ವೆಲ್ ಕೊರೆಸಿ ಅದರಲ್ಲಿ ನೀರು ಲಭ್ಯವಾದರೆ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಪ್ರಕ್ರಿಯೆ ಪರಿಶೀಲನೆ ನಡೆಸಿ ಯೋಜನೆ ಕಾರ್ಯರೂಪಕ್ಕೆ ತರಲು 12 ಮಂದಿ ಗುತ್ತಿಗೆದಾರರನ್ನು ಗುರುತು ಮಾಡಲಾಗಿದೆ. ಅವರುಗಳು ಬೋರ್‌ವೆಲ್‌ಗೆ ಮೋಟಾರ್, ಪ್ಯಾನಲ್ ಹಾಗೂ ಪೈಪ್ ಅಳವಡಿಸಲಿದ್ದಾರೆ. ಇದಕ್ಕೆ ತಗಲುವ ವೆಚ್ಚದಲ್ಲಿ ಶೇ. 20 ರಷ್ಟು ಹಣವನ್ನು ರೈತರು ಭರಿಸಬೇಕು, ಇನ್ನುಳಿದ ಶೇ. 50 ರಷ್ಟು ಹಣ ರಾಜ್ಯ ಸರ್ಕಾರ ಭರಿಸುತ್ತದೆ. ಇನ್ನುಳಿಕೆ ಹಣವನ್ನು ಕೇಂದ್ರ ಸರ್ಕಾರ ಭರಿಸಲಿದೆ ಡಿಸೆಂಬರ್ ಅಂತ್ಯದವರೆಗೆ 40 ಸಾವಿರ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ”, ಎಂದರು.
ಕಡೂರು ಶಾಸಕ ಕೆ.ಎಸ್.ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭದ್ರಾ- ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹಾಗೂ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…