ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ-ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ಇಂದು ನಿರ್ಧರಿಸಲಾಗಿದೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಸಂಬಂಧ ವಿವಿಧ ಇಲಾಖೆಗಳ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ ಎಂದರು.

ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ಸ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್‌ಪಿ, ಎಸಿಪಿ ಮತ್ತು ಎಸ್.ಪಿ ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಕರ್ತವ್ಯಲೋಪವಾದಲ್ಲಿ ಇವರ ವಿರುದ್ಧ ಕ್ರಮ ಖಚಿತ ಎಂದು ತಿಳಿಸಿದರು.

ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ವಹಿಸಲಾಗುವುದು. ಈಗ ಜಾರಿ ಇರುವ ಕಾನೂನನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಮೊದಲು ಪ್ರಯತ್ನ ಮಾಡುತ್ತೇವೆ. ಇದರ ಬಳಿಕವೂ ಅಗತ್ಯಬಿದ್ದರೆ ಹೊಸ ಕಾನೂನು ಮಾಡುತ್ತೇವೆ ಎಂದರು.

ಎನ್.ಸಿ.ಸಿ, ಎನ್.ಜಿ.ಒ ಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ. ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಡ್ರಗ್ಸ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಡ್ರಗ್ಸ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್ ಹಾಕುತ್ತೇವೆ. ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ಕೊಡುವ ಜೊತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತೆಗೆದುಕೊಳ್ಳುತ್ತೇವೆ ಎಂದರು.

ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ‌ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.

ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ಸ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ. ಈಗಾಗಲೇ ಇರುವ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು.

ಬೆಂಗಳೂರು EAST ವಿಭಾಗದಲ್ಲಿ ಡ್ರಗ್ಸ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ‌ ಹಾಕಲು ನಿರ್ಣಯ ಮಾಡಿದ್ದೇವೆ. ಒರಿಸ್ಸಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ ಎಂದರು.

ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಮಾಜವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾದಕ ದ್ರವ್ಯ ಪಿಡುಗಿಗೆ ಕೊನೆಹಾಡುವ ಸಂಕಲ್ಪದೊಂದಿಗೆ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಹಲವು ಸಚಿವರನ್ನು ಒಳಗೊಂಡ ಕಾರ್ಯಪಡೆಯನ್ನು ರಚಿಸಿ, ಆದೇಶ ಹೊರಡಿಸಲಾಗಿದೆ ಎಂದರು.

ಡ್ರಗ್ಸ್ ಹಾವಳಿ ನಿರ್ಮೂಲನೆಯ ಹೊಣೆ ಕೇವಲ ನಮ್ಮೊಬ್ಬರದ್ದಲ್ಲ, ಇದು ಸಮುದಾಯಿಕ ಜವಾಬ್ದಾರಿ. ಡ್ರಗ್ಸ್ ಮಾರಾಟ ಮತ್ತು ಸೇವನೆ ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಿ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದರು.

ನಾವು – ನೀವು ಜೊತೆಗೂಡಿ ಡ್ರಗ್ಸ್ ಮುಕ್ತ – ಸ್ವಸ್ಥ ಕರ್ನಾಟಕ ನಿರ್ಮಿಸೋಣ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

16 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago