Categories: Home

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆ: ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿ-ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನ- ಸಿಎಂ ಸಿದ್ದರಾಮಯ್ಯ

ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟಗಳು ಸೇರಿಕೊಂಡು ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿವೆ. ದೆಹಲಿಯ ನಿವಾಸಿಗಳಿಂದ ನಂದಿನಿ ಉತ್ಪನ್ನಗಳಿಗೆ ಅತ್ಯುತ್ತಮ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ನಾನೂ ಕೂಡ ಪಶುಸಂಗೋಪನಾ ಸಚಿವನಾಗಿದ್ದೆ, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ. ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಿದ್ದೆ ತಿಳಿಸಿದರು.

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಿದ್ದೆ. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್‌ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

5 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

18 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

19 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

22 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

22 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

24 hours ago