ರಾಜ್ಯದಲ್ಲಿ ಬಿಸಿಲಿನ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ತಾಪಮಾನ ಏರಿಕೆಯಿಂದ ತತ್ತರಿಸುತ್ತಿರುವ ಜನ. ಇಂದು ಒಂದೇ ದಿನ ತಾಪಮಾನ 31.8 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ. ಇದು ಇದುವರೆಗೆ ದಾಖಲಾದ 5ನೇ ಅತಿ ಹೆಚ್ಚು ಆಗಸ್ಟ್ ದಿನವಾಗಿದೆ. ಇಲ್ಲಿಯವರೆಗಿನ ತಿಂಗಳ ಒಟ್ಟು ಮಳೆ 4 ಮಿ.ಮೀ. 1885ರಲ್ಲಿ ದಾಖಲಾದ 20.6 ಮಿಮೀ ಒಣ ಆಗಸ್ಟ್‌ನ ಸಾರ್ವಕಾಲಿಕ ದಾಖಲೆಯಾಗಿ ಇತಿಹಾಸ ನಿರ್ಮಾಣ ಮಾಡಿದೆ ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.
ಮುಂಗಾರು ಮಳೆ ಸಾಕಷ್ಟು ಪ್ರಮಾಣದಲ್ಲಿ ಬೀಳದೇ ಇರುವುದು ಎಲ್ಲರನ್ನೂ ಗಾಬರಿಗೊಳಿಸಿದೆ, ಬಿಸಿಲಿನ ಝುಳ ಏರಿಕೆಯಾಗಿರುವುದರಿಂದ ಜನರು ತಳಮಳಿಸುತ್ತಿದ್ದಾರೆ. ಸೂಕ್ತ ಸಮಯಕ್ಕೆ ಮಳೆ ಬಾರದೇ ರೈತರು ಬೆಳೆದ ಬೆಳೆಗಳು ಬಾಡಿಹೋಗುತ್ತಿವೆ, ಪ್ರಾಣಿ ಪಕ್ಷಿಗಳಿಗೆ ನೀರು ಇಲ್ಲದೆ ಸೊರಗುತ್ತಿವೆ.
ಬಿರು ಬಿಸಿಲಿನಿಂದ ಹೀಟ್ ಸ್ಟ್ರೋಕ್ ಮತ್ತು ಚರ್ಮಕ್ಕೆ ಸಂಬಂಧಿಸಿದ ರೋಗಗಳು ಜನರಲ್ಲಿ ಉಲ್ಬಣಗೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹೆಚ್ಚು ಕಾಲ ಬಿಸಿಲಿಗೆ ಚರ್ಮವನ್ನ ಒಡ್ಡದೇ ಎಚ್ಚರಿಕೆ ವಹಿಸಬೇಕಾಗುತ್ತದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…