Categories: ತುಮಕೂರು

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ- ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಸರ್ಕಾರದಲ್ಲಿ ಹಣ ಇಲ್ಲ ಎಂದು ಸುಳ್ಳೋತ್ಪಾದಿಕರಿಗೆ ಈ ಕಾರ್ಯಕ್ರಮವೇ ಒಂದು ಉತ್ತರ. ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಈ ಯೋಜನೆಗಳ ಫಲಾನುಭವಿಗಳು ಸುಳ್ಳೋತ್ಪಾದಕರ ಮುಖಕ್ಕೆ ಸರಿಯಾಗಿ ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, 697 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ ಎಂದರು.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹೊಸ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆತ್ತಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದರಿಂದ ಕೇಂದ್ರದ ಬೆಲೆ ಏರಿಕೆಯಿಂದಾಗಿ ಸೃಷ್ಟಿಯಾಗಿದ್ದ ಸಂಕಷ್ಟವನ್ನು ನಾವು ಕಡಿಮೆ ಮಾಡಿದ್ದೇವೆ. ಆದರೂ ಬಿಜೆಪಿ ಪರಿವಾರದವರು ಸುಳ್ಳಿನ ಉತ್ಪಾದನೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.

2013-18ರ ವರೆಗೆ ನಾವು ಕೊಟ್ಟ ಎಲ್ಲಾ ಭರವಸೆಗಳನ್ನೂ ಈಡೇರಿಸಿದ್ದೇವೆ. ಈ ಬಾರಿ ಚುನಾವಣೆ ವೇಳೆಯಲ್ಲಿ ಕೊಟ್ಟಿದ್ದ ಐದು ಗ್ಯಾರಂಟಿಗಳನ್ನು 8 ತಿಂಗಳ ಒಳಗೆ ಜಾರಿಗೆ ಮಾಡಿದ್ದೇವೆ. ಉಳಿದ ಭರವಸೆಗಳನ್ನೂ ಈಡೇರಿಸುತ್ತಲೇ ಇದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿಯವರೂ ಇದ್ದಾರೆ. ಆದರೂ ಬಿಜೆಪಿಯವರು ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳುಗಳ ಉತ್ಪಾದನೆಯಲ್ಲಿ ತೊಡಗಿದ್ದಾರೆ ಎಂದರು.

142 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ಒಂದು ಕೋಟಿ 50 ಲಕ್ಷ ಮಹಿಳೆಯರಿಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಅನುಕೂಲಗಳು ತಲುಪುತ್ತಿವೆ. ಒಂದು ಕೋಟಿ 18 ಲಕ್ಷ ಮಂದಿಗೆ ಗೃಹಜ್ಯೋತಿಯ ಅನುಕೂಲಗಳು ಸಿಕ್ಕುತ್ತಿವೆ. ಯುವನಿಧಿಗಾಗಿ ಲಕ್ಷಾಂತರ ಯುವಕ ಯುವತಿಯರು ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಸಚಿವರಾದ ಕೆ.ಎನ್.ರಾಜಣ್ಣ, ಕೃಷ್ಣಾ ಭೈರೇಗೌಡ, ಲಕ್ಷ್ಮೀ ಹೆಬ್ಬಾಳಕರ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರುಗಳು ಮತ್ತು ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

35 minutes ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

1 hour ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

4 hours ago

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

18 hours ago