ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ. 2013 – 18ರ ನಮ್ಮ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ದುಪ್ಪಟ್ಟಾದುದ್ದು ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮೆ.ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡಿಲ್ಲ. ಮಳೆ ಅಭಾವದಿಂದಾಗಿ ಪಂಪಸೆಟ್ ಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ. ಸಾಧಾರಣವಾಗಿ, ಅಕ್ಟೋಬರ್ ಮಾಹೆಯವರೆಗೆ 10,000 ಮೆ.ವ್ಯಾ ವಿದ್ಯುತ್ ಖರ್ಚಾಗುತ್ತಿತ್ತು. ಆದರೆ ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ. ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಆದ್ದರಿಂದ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ. ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್ ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್ ನೀಡಬೇಕು, ಹೊರಗಿನಿಂದ ವಿದ್ಯುತ್ ಖರೀದಿಸಲು ಸೂಚನೆ ನೀಡಲಾಗಿದೆ. ಕಬ್ಬು ಅರೆಯುವಿಕೆಯಿಂದ ವಿದ್ಯುತ್ ಕೋ ಜನರೇಷನ್ ನತ್ತಲೂ ಗಮನ ಹರಿಸಲು ಸೂಚಿಸಲಾಗಿದೆ. ಲೋಡ್ ಶೆಡ್ಡಿಂಗ್ ನಿಂದ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರೊ ಗುತ್ತಿಗೆದಾರನ ಮನೆಯಲ್ಲಿ ಹಣ ಪತ್ತೆಯಾಗಿದ್ದರೆ ಅದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವ ತನಿಖೆಯನ್ನು ನಡೆಸುವ ಅವಶ್ಯಕತೆಯಿಲ್ಲ. ದಾಳಿ ಮಾಡಿದವರು ಆದಾಯ ತೆರಿಗೆ ಇಲಾಖೆಯವರು, ತನಿಖೆಯನ್ನೂ ಅವರೇ ಮಾಡುತ್ತಾರೆ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಸೋಲಿನ ಭಯಕ್ಕಾಗಿ ನಮ್ಮ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಮೇವಿನ ಕೊರತೆಯಿಲ್ಲ. ಆದರೂ ಮೇವು ಬೆಳೆಸಲು ಹಾಗೂ ಶೇಖರಣೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. 236 ತಾಲ್ಲೂಕುಗಳ ಪೈಕಿ 216 ತಾಲ್ಲೂಕುಗಳು ಬರಪೀಡಿತವಾಗಿದೆ. ವಾಸ್ತವವಾಗಿ 42 ಸಾವಿರ ಹೆಕ್ಟೇರ್‌ನಲ್ಲಿ ಬೆಳೆಹಾನಿಯಾಗಿದ್ದು, 30 ಸಾವಿರ ಕೋಟಿಯಷ್ಟು ನಷ್ಟವಾಗಿದೆ, ಕೇಂದ್ರದ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರ ಮೊತ್ತ ಕೋರಲಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ, ಖಾಸಗಿ ಕೊಳವೆಬಾವಿಗಳನ್ನು ಬಳಸಬೇಕು, ಅಗತ್ಯವಿದ್ದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಸಹ ತಿಳಿಸಲಾಗಿದೆ. ಒಟ್ಟಾರೆ ಜನರ ಕೈಗೆ ಕೆಲಸ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…