Categories: ಮೈಸೂರು

ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ: ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ: ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ- ಸಿಎಂ‌ ಸಿದ್ದರಾಮಯ್ಯ

ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ. 2013 – 18ರ ನಮ್ಮ‌ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ದುಪ್ಪಟ್ಟಾದುದ್ದು ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮೆ.ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡಿಲ್ಲ. ಮಳೆ ಅಭಾವದಿಂದಾಗಿ ಪಂಪಸೆಟ್ ಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ. ಸಾಧಾರಣವಾಗಿ, ಅಕ್ಟೋಬರ್ ಮಾಹೆಯವರೆಗೆ 10,000 ಮೆ.ವ್ಯಾ ವಿದ್ಯುತ್ ಖರ್ಚಾಗುತ್ತಿತ್ತು. ಆದರೆ ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ. ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಆದ್ದರಿಂದ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ. ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್ ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್ ನೀಡಬೇಕು, ಹೊರಗಿನಿಂದ ವಿದ್ಯುತ್ ಖರೀದಿಸಲು ಸೂಚನೆ ನೀಡಲಾಗಿದೆ. ಕಬ್ಬು ಅರೆಯುವಿಕೆಯಿಂದ ವಿದ್ಯುತ್ ಕೋ ಜನರೇಷನ್ ನತ್ತಲೂ ಗಮನ ಹರಿಸಲು ಸೂಚಿಸಲಾಗಿದೆ. ಲೋಡ್ ಶೆಡ್ಡಿಂಗ್ ನಿಂದ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು‌ ಮುಖ್ಯಮಂತ್ರಿ‌ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರೊ ಗುತ್ತಿಗೆದಾರನ ಮನೆಯಲ್ಲಿ ಹಣ ಪತ್ತೆಯಾಗಿದ್ದರೆ ಅದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವ ತನಿಖೆಯನ್ನು ನಡೆಸುವ ಅವಶ್ಯಕತೆಯಿಲ್ಲ. ದಾಳಿ ಮಾಡಿದವರು ಆದಾಯ ತೆರಿಗೆ ಇಲಾಖೆಯವರು, ತನಿಖೆಯನ್ನೂ ಅವರೇ ಮಾಡುತ್ತಾರೆ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಸೋಲಿನ ಭಯಕ್ಕಾಗಿ ನಮ್ಮ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮೇವಿನ ಕೊರತೆಯಿಲ್ಲ. ಆದರೂ ಮೇವು ಬೆಳೆಸಲು ಹಾಗೂ ಶೇಖರಣೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. 236 ತಾಲ್ಲೂಕುಗಳ ಪೈಕಿ 216 ತಾಲ್ಲೂಕುಗಳು ಬರಪೀಡಿತವಾಗಿದೆ. ವಾಸ್ತವವಾಗಿ 42 ಸಾವಿರ ಹೆಕ್ಟೇರ್‌ನಲ್ಲಿ ಬೆಳೆಹಾನಿಯಾಗಿದ್ದು, 30 ಸಾವಿರ ಕೋಟಿಯಷ್ಟು ನಷ್ಟವಾಗಿದೆ, ಕೇಂದ್ರದ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರ ಮೊತ್ತ ಕೋರಲಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ, ಖಾಸಗಿ ಕೊಳವೆಬಾವಿಗಳನ್ನು ಬಳಸಬೇಕು, ಅಗತ್ಯವಿದ್ದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಸಹ ತಿಳಿಸಲಾಗಿದೆ. ಒಟ್ಟಾರೆ ಜನರ ಕೈಗೆ ಕೆಲಸ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

4 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

7 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

10 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

12 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

13 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago