ರಾಜ್ಯದಲ್ಲಿ ಸುಗಮ ಸಂಚಾರಕ್ಕಾಗಿ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ‌ ಮನವಿ

ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಸಿಎಂ ಸಿದ್ದರಾಮಯ್ಯ ನವರು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಬೆಳಗಾವಿ – ಹುನಗುಂದ – ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ‌.

ರಾಜ್ಯದಲ್ಲಿ 5,225 ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು:

• ದಿನಕ್ಕೆ 10,000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳ ಉನ್ನತೀಕರಣ

• ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು

• ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ ನೀಡುವುದು

• ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ ನೀಡುವುದು.

• ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡುವುದು

• ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ

• ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ

• ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ

• NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ

• ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ

• ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು

• ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಣ

ಹೀಗೆ ರಾಜ್ಯದಲ್ಲಿ ಸುಗಮ ಸಂಚಾರಕ್ಕಾಗಿ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಮನವಿ ನೀಡಲಾಗಿದೆ.

Ramesh Babu

Journalist

Share
Published by
Ramesh Babu

Recent Posts

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

9 minutes ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

2 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

7 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

11 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago