ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಸಿಎಂ ಸಿದ್ದರಾಮಯ್ಯ ನವರು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಬೆಳಗಾವಿ – ಹುನಗುಂದ – ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ, ಸೂರತ್ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ 5,225 ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.
ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು:
• ದಿನಕ್ಕೆ 10,000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳ ಉನ್ನತೀಕರಣ
• ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು
• ಮೈಸೂರು ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಅನುಮೋದನೆ ನೀಡುವುದು
• ಮೈಸೂರು ರಿಂಗ್ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ ನೀಡುವುದು.
• ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡುವುದು
• ಬೆಳಗಾವಿ ಜಿಲ್ಲೆಯ ಗೋಕಾಕ್ ಜಲಪಾತದಲ್ಲಿ ಕೇಬಲ್ ಕಾರ್ ಸೌಲಭ್ಯ ಕಲ್ಪಿಸುವ ಯೋಜನೆ
• ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ
• ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್ ನಿರ್ಮಾಣ
• NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ
• ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ
• ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು
• ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಣ
ಹೀಗೆ ರಾಜ್ಯದಲ್ಲಿ ಸುಗಮ ಸಂಚಾರಕ್ಕಾಗಿ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಮನವಿ ನೀಡಲಾಗಿದೆ.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…