ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ಹೇಳಿದ್ದಾರೆ.
ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡದ ಸದಸ್ಯರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸುವಂತಾಗಬೇಕು ಎಂದರು.
ಮುಂಗಾರು ವಿಳಂಬ ಹಾಗೂ ಆಗಸ್ಟ್ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದರು.
ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟಲೈಸ್ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದಿದ್ದಾರೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…