ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ: 42 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ: ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕು- ಸಿಎಂ ಸಿದ್ದರಾಮಯ್ಯ

ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ಹೇಳಿದ್ದಾರೆ.

ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡದ ಸದಸ್ಯರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸುವಂತಾಗಬೇಕು ಎಂದರು.

ಮುಂಗಾರು ವಿಳಂಬ ಹಾಗೂ ಆಗಸ್ಟ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್‌ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದರು.

ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟಲೈಸ್‌ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

6 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

10 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

11 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

12 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

14 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

17 hours ago