ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಿ- ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ಉಳಿತಾಯ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ 108 ಅಂಬ್ಯುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

108 ಅಧೀನದಲ್ಲಿರುವ ಒಟ್ಟು 715 ಅಂಬ್ಯುಲೆನ್ಸ್ ನಿರ್ವಹಣೆಗಾಗಿ ರಾಜ್ಯ ಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು. ಇದಕ್ಕಾಗಿ 112 NG -ERSS ತಂತ್ರಾಂಶ ಬಳಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 ಕಂಟ್ರೋಲ್ ಸೆಂಟರ್ ಗಳು ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ ಎಂದರು.

ಅಂಬ್ಯುಲೆನ್ಸ್ ಗಳಿಗೆ ಚಾಲಕರು ಹಾಗೂ ನರ್ಸ್ ಸಿಬ್ಬಂದಿಯನ್ನು ಜಿಲ್ಲಾ ಮಟ್ಟದಲ್ಲಿಯೇ ಹೊರಗುತ್ತಿಗೆಯಲ್ಲಿ ನೇಮಕಾತಿ  ಮಾಡಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಹೊರತಾಗಿ ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಅಂಬ್ಯುಲೆನ್ಸ್ ಗಳನ್ನು ಕೂಡಾ 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಕೋಲಾರ ಜಿಲ್ಲೆಯಲ್ಲಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ರಾಜ್ಯಾದ್ಯಂತ ಯೋಜನೆ ಜಾರಿಯಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಜಿಲ್ಲೆಗಳಲ್ಲಿ ತಪಾಸಣಾ ಕಾರ್ಯ ಆರಂಭವಾಗಲಿದೆ ಎಂದರು.

ಆಶಾ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ 30 ವರ್ಷ ಮೇಲ್ಪಟ್ಟವರು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತಪಾಸಣೆಗೆ ಒಳಪಡಲು ನೆರವಾಗಲಿದ್ದಾರೆ. ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್ ಸೇರಿದಂತೆ  14 ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಸಮುದಾಯ ಆರೋಗ್ಯ ಅಧಿಕಾರಿಗಳು ನಡೆಸಲಿದ್ದಾರೆ ಎಂದರು.

ರೋಗಗಳಿಗೆ ತುತ್ತಾದವರಿಗೆ, ಅವರ ಬಳಿಗೆ ಉಚಿತವಾಗಿ ಔಷಧಗಳನ್ನು ಒದಗಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಒಂದು ದೂರದೃಷ್ಟಿಯ ಯೋಜನೆಯಾಗಿರುವ ‘ಗೃಹ ಆರೋಗ್ಯ’ , ಮುಂಬರುವ ವರ್ಷಗಳಲ್ಲಿ ಹಲವರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

3 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

5 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

17 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

18 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

18 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

1 day ago