ಈ ಹಿಂದೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತವೆಂದು ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿತ್ತು. ಈ ಫೈಕಿ 22 ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಹಾನಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿಗಳು ನೀಡಿರುವ ವರದಿಯನ್ವಯ 11 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 11 ಸಾಧಾರಣ ಬರಪೀಡಿತ ತಾಲೂಕುಗಳೆಂದು ನಿರ್ಧರಿಸಲಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ – 2020ರ ಮಾರ್ಗಸೂಚಿಯಂತೆ 189 ತೀವ್ರ ಬರಪೀಡಿತ ತಾಲೂಕು ಹಾಗೂ 27 ಸಾಧಾರಣ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿ, ಆದೇಶಿಸಲಾಗಿದೆ.