ರಾಜ್ಯದಲ್ಲಿ 69,922 ಅಂಗನವಾಡಿ ಕೇಂದ್ರಗಳು‌ ಕಾರ್ಯನಿರ್ವಹಣೆ- 5,000 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ , ಯುಕೆಜಿ ತರಗತಿ ಪ್ರಾರಂಭ-ಸಿಎಂ ಸಿದ್ದರಾಮಯ್ಯ

ಅಕ್ಟೋಬರ್ 2, 2025 ಕ್ಕೆ ಐಸಿಡಿಎಸ್ ಕಾರ್ಯಕ್ರಮಕ್ಕೆ 50 ವರ್ಷಗಳು ತುಂಬಿರುವುದು ಒಂದು ಬೃಹತ್ ಮೈಲುಗಲ್ಲು. ಭಾರತದ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾ ಗಾಂಧಿಯವರು ಹಮ್ಮಿಕೊಂಡಿದ್ದ ದೂರದೃಷ್ಟಿಯ ಯೋಜನೆಯೇ ಐಸಿಡಿಎಸ್. ಎಪ್ಪತ್ತರ ದಶಕದಲ್ಲಿ ಮಹಿಳೆ ಮತ್ತು ಮಕ್ಕಳಲ್ಲಿ ಅಪೌಷ್ಠಿಕತೆ, ಶಿಶು ಮತ್ತು ತಾಯಿಮರಣ ಹೆಚ್ಚಿದ ಸಂದರ್ಭದಲ್ಲಿ ಈ ಕಾರ್ಯಕ್ರಮ ಜಾರಿಯಾಗಿತ್ತು. ಶ್ರೀಮತಿ ಇಂದಿರಾ ಗಾಂಧಿಯವರು, ತಾಯಿ ಮತ್ತು ಮಕ್ಕಳ ಮರಣ ತಡೆಗಟ್ಟಲು ಹಾಗೂ ಅವರಲ್ಲಿ ಅಪೌಷ್ಠಿಕತೆ ನಿವಾರಿಸುವ ಉದ್ದೇಶದಿಂದ ಜಾರಿ ಮಾಡಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆ, ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ 69,922 ಅಂಗನವಾಡಿ ಕೇಂದ್ರಗಳಿದ್ದು, ಸುಮಾರು 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಈ ಕೇಂದ್ರಗಳಿಂದ ಲಾಭ ಪಡೆಯುತ್ತಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮೊದಲು ಪ್ರಾರಂಭಗೊಂಡ ಅಂಗನವಾಡಿ ಕೇಂದ್ರ, 33 ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸಿತು. ಪ್ರಸ್ತುತ ರಾಜ್ಯಾದ್ಯಂತ 69,922 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತೆಯರು ಹಾಗೂ ಸಹಾಯಕರು ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದು, ಇವರು ಮಕ್ಕಳ ಆರೈಕೆಯಲ್ಲಿ ನಿರತವಾಗಿರುವ ಎರಡನೇ ತಾಯಿಯಂತಿದ್ದಾರೆ. ಇದು ಉದಾತ್ತವಾದ ಕೆಲಸ. ಮಕ್ಕಳು ದೇಶದ ಮುಂದಿನ ಭವಿಷ್ಯ. ಐಸಿಡಿಎಸ್ ಕಾರ್ಯಕ್ರಮದಿಂದ ಶಿಶು ಹಾಗೂ ತಾಯಿಮರಣ ಗಣನೀಯವಾಗಿ ಕಡಿಮೆಯಾಗಿದೆ. ವಿವಿಧೋದ್ದೇಶ ಸಹಕಾರ ಸಂಘವನ್ನು ಪ್ರಾರಂಭಿಸಲಾಗುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಸಹಾಯವಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

ಹೆಣ್ಣೊಬ್ಬಳು ವಿದ್ಯಾವಂತೆಯಾದರೆ ಇಡೀ ಕುಟುಂಬ ಶಿಕ್ಷಣ ಪಡೆಯುತ್ತದೆ. ನಮ್ಮ ಸರ್ಕಾರದ ಶಕ್ತಿ ಯೋಜನೆಯಡಿ 600 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1 ಕೋಟಿ 26 ಲಕ್ಷ ಕುಟುಂಬಗಳ ಯಜಮಾನಿಯರಿಗೆ 2,000 ರೂ.ಗಳನ್ನು ಒದಗಿಸಲಾಗಿದೆ. ಹೆಣ್ಣುಮಕ್ಕಳು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕೆಂದು ಹಾಗೂ ಮಹಿಳೆಯರು ಮುಖ್ಯವಾಹಿನಿಗೆ ಬಂದು, ಸಮಾನ ಅವಕಾಶಗಳನ್ನು ಪಡೆಯಬೇಕೆನ್ನುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇಲ್ಲಿಯವರೆಗೆ ಗ್ಯಾರಂಟಿಗಳಿಗೆ ಸರ್ಕಾರ 1 ಲಕ್ಷ ನಾಲ್ಕು ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರ ಕಣ್ಣು ತೆರೆಯಬೇಕು. ಬಿಜೆಪಿಯವರು, ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ವಿರೋಧಿಸಿದ್ದರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಅಭಿವೃದ್ಧಿ ಯೋಜನೆಗೂ ವೆಚ್ಚ ಮಾಡಲಾಗುತ್ತಿದೆ. ಮಹಿಳೆಯರು ಸಬಲರಾದರೆ ಮಾತ್ರ ನಮಗೆ ದೊರೆತಿರುವ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂದರು.

ಸಮಾಜದಲ್ಲಿ ಅಸಮಾನತೆ, ಲಿಂಗ ತಾರತಮ್ಯ ಹೋಗಲಾಡಿಸಬೇಕು. ಈ ವರ್ಷದ ಬಜೆಟ್ ನಲ್ಲಿ 95,000ಕೋಟಿ ರೂ. ಗಳನ್ನು ಮಹಿಳಾ ಕಲ್ಯಾಣಕ್ಕಾಗಿ ಮೀಸಲಿಡಲಾಗಿದೆ. ಲಿಂಗ ತಾರಾತಮ್ಯ ಹೋಗಲಾಡಿಸಲು ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ನಮ್ಮ ಸರ್ಕಾರ ಎಲ್ಲರನ್ನು ಒಳಗೊಂಡ, ಸಾಮಾಜಿಕ, ಆರ್ಥಿಕ ಶಕ್ತಿ ನೀಡುತ್ತಿದೆ. ಜಾತಿ, ಲಿಂಗ ಮತ್ತು ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿಲ್ಲ. ಸಮಗ್ರ ಅಭಿವೃದ್ಧಿ ನಮ್ಮ ಗುರಿ. ಬಡವ – ಬಲ್ಲಿದ ಎಂಬ ತಾರತಮ್ಯ ಹೋಗಲಾಡಿಸಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಹೇಳಿದರು.

ಐಸಿಡಿಎಸ್ ಕೇಂದ್ರ ಸರ್ಕಾರದ ಕಾರ್ಯಕ್ರಮವಾದರೂ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ಕೊಡುತ್ತಿದೆ. ಕೇಂದ್ರದಿಂದ 2,700 ರೂ. ಬಂದರೆ, ರಾಜ್ಯ ಸರ್ಕಾರ ರೂ. 8,500 ಒದಗಿಸುತ್ತಿದೆ. ಇಡೀ ದೇಶದಲ್ಲಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರಿಗೆ ಹೆಚ್ಚಿನ ಗೌರವಧನವನ್ನು ಕರ್ನಾಟಕ ಸರ್ಕಾರ ನೀಡುತ್ತಿದೆ ಎಂದರು.

ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಯಾದ ಮೇಲೆ ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಐಸಿಡಿಎಸ್ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿರುವ ರಾಜ್ಯಗಳಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಶಕ್ತಿ ಯೋಜನೆ ಜಾರಿಯಾದ ಮೇಲೆ ಉದ್ಯೋಗಕ್ಕೆ ಹೋಗುವ ಮಹಿಳೆಯರ ಪಾಲು ಶೇ 23% ಇದ್ದರೆ, ಗ್ರಾಮೀಣ ಭಾಗದಲ್ಲಿ 21% ಹೆಚ್ಚಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳುವಷ್ಟು ಕೆಲಸವನ್ನು ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಮಕ್ಕಳು, ತಾಯಂದಿರ ಅಪೌಷ್ಟಿಕತೆ ತೊಲಗಿಸಿ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲಾಗುವುದು. ರಾಜ್ಯದ ಒಟ್ಟು 5,000 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ , ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ತರಗತಿಗಳನ್ನು ಇನ್ನೂ ಹೆಚ್ಚಿನ ಕೇಂದ್ರಗಳಲ್ಲಿ ಪ್ರಾರಂಭಿಸಲಾಗುವುದು. ಮಹಿಳೆಯರ ಬದುಕಿನಲ್ಲಿ ಚೈತನ್ಯ ತುಂಬಲು ಹಾಗೂ ಮಕ್ಕಳು ಅಪೌಷ್ಠಿಕತೆಯಿಂದ ಬಳಲಬಾರದೆಂಬ ಸಾರ್ಥಕ ಉದ್ದೇಶವನ್ನು ಐಸಿಡಿಎಸ್ ಕಾರ್ಯಕ್ರಮ ಪೂರೈಸಿದೆ ಎಂದರು.

ವಿಶ್ವ ಹಿರಿಯನಾಗರಿಕರ ದಿನಾಚರಣೆಯ ಶುಭಾಶಯಗಳು. ಹಿರಿಯ ನಾಗರಿಕರು ನೆಮ್ಮದಿಯ ಹಾಗೂ ಗೌರವಯುತ ಜೀವನ ನಡೆಸುವಂತಾಗಬೇಕು, ಇದು ನಮ್ಮ ಸರ್ಕಾರದ ಆಶಯವೂ ಆಗಿದೆ. ಇದೇ ಸಂದರ್ಭದಲ್ಲಿ ಮಹಿಳೆಯರ ರಕ್ಷಣೆ ಹಾಗೂ ಭದ್ರತೆಯನ್ನು ಖಾತ್ರಿಪಡಿಸುವ ‘ಅಕ್ಕಾ’ ಪಡೆಯನ್ನು ಇಂದು ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ ಎಂದು ತಿಳಿಸಿದರು.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

2 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

2 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

10 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

23 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

1 day ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago