ರಾಜ್ಯದ ಅಭಿವೃದ್ಧಿಗಾಗಿ ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ‌ ಪಕ್ಷಬೇಧ ಮರೆತು ಧ್ವನಿ ಎತ್ತಬೇಕು- ರಾಜ್ಯದ ಸಂಸದರಲ್ಲಿ‌ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ. ಇದಕ್ಕಾಗಿ ಸೌಹಾರ್ದಯುತ ಸಭೆ ಆಯೋಜಿಸಲಾಗಿದೆ. ಕರುನಾಡು ಮತ್ತು ಕನ್ನಡಿಗರ ಹಿತಕ್ಕಾಗಿ ತಮ್ಮೆಲ್ಲರ ಸಹಕಾರ ಇರಲಿ ಎಂದು ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ‌ ಸಿಎಂ ಸಿದ್ದರಾಮಯ್ಯ  ಮನವಿ ಮಾಡಿದರು.

ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪಾಲ್ಗೊಂಡು, ಅವರು ಮಾತನಾಡಿದರು.

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಬಜೆಟ್ ನಲ್ಲೇ ಅನುದಾನ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಡಿಸಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದರು.

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ.
ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ ಎಂದರು.

18,172 ಕೋಟಿ ರೂ. ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ, ಇದಕ್ಕಾಗಿ ನಿಮ್ಮೆಲ್ಲರ ಪ್ರಯತ್ನ ಅಗತ್ಯವಿದೆ.

ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಬಾಕಿ ಇದೆ. ಇದರ ಈಡೇರಿಕೆಗೆ ತಾವು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳುತ್ತದೆ.
ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ ಎಂದರು.

ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮ‌ಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು ಎಂದು ತಿಳಿಸಿದರು.

ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆದ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಲ್ಲಿ ಮನವಿ ಮಾಡುತ್ತೇನೆ.

ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ ಎಂದು ಹೇಳಿದರು.

15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಬಲವಾಗಿ ವಾದ ಮಂಡಿಸಬೇಕಾಗಿದೆ.
ಕಳಸಾ ಬಂಡೂರಿ ಯೋಜನೆಗೆ ಪರಿಸರ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ ಎಂದರು.

1971 ಸೆನ್ಸಸ್ ಪರಿಗಣಿಸಿದ್ದರೆ ನಮಗೆ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಲು ಸಾಧ್ಯವಾಗುತ್ತಿರಲಿಲ್ಲ. 15ನೇ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಿರುವ ಮತ್ತು ಬಜೆಟ್ ನಲ್ಲಿ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಘೋಷಿಸಿರುವ ಮೊತ್ತವನ್ನು ಒದಗಿಸಿಕೊಡಬೇಕು ಎಂದು ಮನವಿ ಮಾಡುತ್ತೇನೆ.
ಇನ್‌ಪುಟ್ ಸಬ್ಸಿಡಿ ಸಮರ್ಪವಾಗಿ ಒದಗಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎನ್ನುವುದಷ್ಟೆ ನನ್ನ ಮನವಿ ಎಂದರು.

ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ ಈ ಬಗ್ಗೆ ತಾವೆಲ್ಲರೂ ಪಕ್ಷಬೇಧ ಮರೆತು ಧ್ವನಿ ಎತ್ತಬೇಕಾಗಿ ಮನವಿ ಮಾಡುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

11 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

12 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

12 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

13 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

15 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

16 hours ago