ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ- ಸಿಎಂ ಸಿದ್ದರಾಮಯ್ಯ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ಕೆ. ಎ. ತಿಪ್ಪೇಸ್ವಾಮಿಯವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರ ಹೀಗಿದೆ..

ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಕಲ್ಯಾಣ ಕಾರ್ಯಗಳಿಗಾಗಿ ವಿನಿಯೋಗಿಸಲಾಗುತ್ತಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. 1 ಲಕ್ಷದ 4 ಸಾವಿರ ಕೋಟಿ ರೂ. ಸಾಲ ಮಾಡಿದರೂ ಕೂಡ ಮಾನದಂಡ ಮೀರಿಲ್ಲ. ಶೇ.25 ರ ಒಳಗಡೆಯೇ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯಾವುದೇ ಸರ್ಕಾರ ತನ್ನ ಖರ್ಚುಗಳನ್ನು ಮಾಡಬೇಕಾದರೆ ಸಾಲವನ್ನು ಮಾಡಬೇಕಾಗುತ್ತದೆ. ನಮ್ಮ ಇತಿಮಿತಿಗಳನ್ನು ಪರಿಶೀಲಿಸಿ ಸಾಲ ಮಾಡಲಾಗುತ್ತದೆ. ಒಟ್ಟು ಸಾಲ ಶೇ.25ರ ವರೆಗೂ ಮೀರಬಾರದು ಎಂಬ ಮಾನದಂಡಗಳಿದ್ದು, ನಮ್ಮ ಸರ್ಕಾರದ ಸಾಲ ಮಿತಿಯ ಒಳಗಡೆ ಇದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದ ಸಾಲ ಕಡಿಮೆ ಇದೆ ಎಂದರು.

ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ.ಗಳನ್ನು ನೀಡಲಾಗಿದೆ. ಉಳಿದ ಹಣವನ್ನು ಅಭಿವೃದ್ಧಿಗೆ ನೀಡಲಾಗುತ್ತಿದೆ.‌ ವಿರೋಧ ಪಕ್ಷದವರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದದ್ದು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

2017-18 ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿಗೆ ₹36 ಸಾವಿರ ಕೋಟಿ ಹಣವನ್ನು ವ್ಯಯಿಸಲಾಗಿದೆ. ಈ ವರ್ಷ ₹39,272 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಮಾತ್ರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದರು.

ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಈ ಕಾಯ್ದೆಯನ್ನು ಏಕೆ ಜಾರಿ ಮಾಡಿಲ್ಲ? ಕೇಂದ್ರ ಸರ್ಕಾರ ಏಕೆ ಈ ಕಾಯ್ದೆಯನ್ನು ಮಾಡಿಲ್ಲ? ಎಂದು ಪ್ರಶ್ನೆ ಮಾಡಿದರು.

ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ರಾಯಚೂರಿನ ಸಿಂಧನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ. 2023-24ನೇ ಸಾಲಿನಲ್ಲಿ ಅಭಿವೃದ್ಧಿ ಕೆಲಸಗಳಿಗೆಂದೇ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ ಎಂದು ಹೇಳಿದರು.

ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ 52,009 ಕೋಟಿ ರೂ.ಗಳನ್ನು ಒದಗಿಸಿದೆ ಎಂದರು.

ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ.ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ರಾಜಸ್ವ ಹಾಗೂ ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ ಅಂದಾಜಿಸಿರುವ ವೆಚ್ಚವನ್ನು ಭರಿಸುತ್ತದೆ. ಈ ಸ್ವೀಕೃತಿಗಳನ್ನು ಮೀರಿ ಈವರೆಗೂ ಯಾವುದೇ ವೆಚ್ಚದ ಹೊರೆ ರಾಜ್ಯ ಸರ್ಕಾರಕ್ಕೆ ಉಂಟಾಗಿರುವುದಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿದ್ದು. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದರು.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

4 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

6 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

8 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

18 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago