ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ ಎಂದರು.
ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…