ರಾಜ್ಯದ ಈ ಹೆದ್ದಾರಿಯನ್ನು ಉನ್ನತಿಕರಿಸಲು ಕೋಟಿ ಕೋಟಿ ಹಣ ಮಂಜೂರು: ಈ ಹೆದ್ದಾರಿ ಯಾವ್ಯಾವ ಜಿಲ್ಲೆಗಳಲ್ಲಿ ಹಾದುಹೋಗಲಿದೆ:

ರಾಜ್ಯದ ಈ ರಾಷ್ಟ್ರೀಯ ಹೆದ್ದಾರಿ ಉನ್ನತೀಕರಣಕ್ಕೆ ₹2,675.31 ಕೋಟಿ ಮಂಜೂರು, ಯಾವ್ಯಾವ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ?

ರಾಜ್ಯದ ಬಹುತೇಕ ಭಾಗಗಳಲ್ಲಿ ಹೆಚ್ಚಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹಾಗೆಯೇ ಇದೀಗ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-748ಎ ಉನ್ನತಿಕರಿಸಲು ಹಣ ಬಿಡುಗಡೆ ಮಾಡಲಾಗಿದೆ. ಹಾಗಾದರೆ ಎಷ್ಟು ಕೋಟಿ ಹಣ ಮಂಜೂರು ಮಾಡಲಾಗಿದೆ ಹಾಗೂ ಈ ಹೆದ್ದಾರಿ ಯಾವೆಲ್ಲ ಜಿಲ್ಲೆಗಳಲ್ಲಿ ಹಾದುಹೋಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬೆಳಗಾವಿ-ಹುನಗುಂದ-ರಾಯಚೂರು ವಿಭಾಗ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ಹೆದ್ದಾರಿ ಸಚಿವಾಲಯ 2,675.31 ಕೋಟಿ ರೂಪಾಯಿ ಮಂಜೂರು ಮಾಡಿದೆ. ಈ ಉಪಕ್ರಮವು ಒಟ್ಟು 92.40 ಕಿಲೋ ಮೀಟರ್‌ ಉದ್ದದ ಹೆದ್ದಾರಿಯನ್ನು ಒಳಗೊಂಡಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.

ಇನ್ನು ಈ ಯೋಜನೆಯು ಪಣಜಿ-ಹೈದರಾಬಾದ್ EC10 ಕಾರಿಡಾರ್‌ನ ಅವಿಭಾಜ್ಯ ಅಂಗವಾಗಿದೆ ಎಂದು ಅವರು ಹೇಳಿದ್ದಾರೆ. EC10 ಮೀನುಗಾರಿಕೆ ಮತ್ತು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಪಣಜಿ, ಆಹಾರ ಧಾನ್ಯಗಳು ಮತ್ತು ಹಾಲಿನ ಉತ್ಪನ್ನಗಳಿಗೆ ಹೆಸರುವಾಸಿಯಾಗಿರುವ ಬೆಳಗಾವಿ, ಅಕ್ಕಿ, ಹತ್ತಿ, ಶೇಂಗಾ, ಮತ್ತು ಬೇಳೆಕಾಳುಗಳಿಗೆ ಹೆಸರುವಾಸಿಯಾಗಿರುವ ರಾಯಚೂರು ಮತ್ತು ಐಟಿ, ಫಾರ್ಮ್ ಮತ್ತು ಹೆಲ್ತ್‌ಕೇರ್‌ಗೆ ವಿಶಿಷ್ಟ ಸ್ಥಾನ ಪಡೆದಿರುವ ಹೈದರಾಬಾದ್ ಸೇರಿದಂತೆ ಪ್ರಮುಖ ಕೈಗಾರಿಕಾ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುತ್ತದೆ.

Leave a Reply

Your email address will not be published. Required fields are marked *