ರಾಜ್ಯದ ಈ ರಾಷ್ಟ್ರೀಯ ಹೆದ್ದಾರಿ ಉನ್ನತೀಕರಣಕ್ಕೆ ₹2,675.31 ಕೋಟಿ ಮಂಜೂರು, ಯಾವ್ಯಾವ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ?
ರಾಜ್ಯದ ಬಹುತೇಕ ಭಾಗಗಳಲ್ಲಿ ಹೆಚ್ಚಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹಾಗೆಯೇ ಇದೀಗ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-748ಎ ಉನ್ನತಿಕರಿಸಲು ಹಣ ಬಿಡುಗಡೆ ಮಾಡಲಾಗಿದೆ. ಹಾಗಾದರೆ ಎಷ್ಟು ಕೋಟಿ ಹಣ ಮಂಜೂರು ಮಾಡಲಾಗಿದೆ ಹಾಗೂ ಈ ಹೆದ್ದಾರಿ ಯಾವೆಲ್ಲ ಜಿಲ್ಲೆಗಳಲ್ಲಿ ಹಾದುಹೋಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಳಗಾವಿ-ಹುನಗುಂದ-ರಾಯಚೂರು ವಿಭಾಗ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ಹೆದ್ದಾರಿ ಸಚಿವಾಲಯ 2,675.31 ಕೋಟಿ ರೂಪಾಯಿ ಮಂಜೂರು ಮಾಡಿದೆ. ಈ ಉಪಕ್ರಮವು ಒಟ್ಟು 92.40 ಕಿಲೋ ಮೀಟರ್ ಉದ್ದದ ಹೆದ್ದಾರಿಯನ್ನು ಒಳಗೊಂಡಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.
ಇನ್ನು ಈ ಯೋಜನೆಯು ಪಣಜಿ-ಹೈದರಾಬಾದ್ EC10 ಕಾರಿಡಾರ್‌ನ ಅವಿಭಾಜ್ಯ ಅಂಗವಾಗಿದೆ ಎಂದು ಅವರು ಹೇಳಿದ್ದಾರೆ. EC10 ಮೀನುಗಾರಿಕೆ ಮತ್ತು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಪಣಜಿ, ಆಹಾರ ಧಾನ್ಯಗಳು ಮತ್ತು ಹಾಲಿನ ಉತ್ಪನ್ನಗಳಿಗೆ ಹೆಸರುವಾಸಿಯಾಗಿರುವ ಬೆಳಗಾವಿ, ಅಕ್ಕಿ, ಹತ್ತಿ, ಶೇಂಗಾ, ಮತ್ತು ಬೇಳೆಕಾಳುಗಳಿಗೆ ಹೆಸರುವಾಸಿಯಾಗಿರುವ ರಾಯಚೂರು ಮತ್ತು ಐಟಿ, ಫಾರ್ಮ್ ಮತ್ತು ಹೆಲ್ತ್‌ಕೇರ್‌ಗೆ ವಿಶಿಷ್ಟ ಸ್ಥಾನ ಪಡೆದಿರುವ ಹೈದರಾಬಾದ್ ಸೇರಿದಂತೆ ಪ್ರಮುಖ ಕೈಗಾರಿಕಾ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…