Categories: ರಾಜ್ಯ

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಏಕಕಾಲಕ್ಕೆ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗಿನಿಂದಲೇ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

ಬೆಳಗ್ಗೆ ಸುಮಾರು 6 ಗಂಟೆಯಿಂದಲೇ ಲೋಕಾಯುಕ್ತ ಪೊಲೀಸರು ಹಲವು ತಂಡಗಳಾಗಿ ವಿಭಜನೆಗೊಂಡು ದಾಳಿ ಆರಂಭಿಸಿದ್ದಾರೆ. ಬೆಂಗಳೂರು ನಗರದಲ್ಲಿ ವೆಟರ್ನರಿ ಕಾಲೇಜು ಹೆಬ್ಬಾಳದ ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್ ಹಾಗೂ ಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಯಾದಗಿರಿಯಲ್ಲಿ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ವಿರೇಶ್ ಹಿರೇಮಠ್ ಅವರ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಮಂಡ್ಯದಲ್ಲಿ ಸಾರ್ವಜನಿಕ ಕಾಮಗಾರಿಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತೀಶ್ ಅವರ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಧಾರವಾಡದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಂ.ಕೆ. ಸುರಕೋಡ ಅವರ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಾಸನ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ ಅವರ ಮನೆ ಮೇಲೆ ದಾಳಿ ನಡೆಸಿದ ವೇಳೆ ಅಧಿಕಾರಿಗಳು ಬಾಗಿಲು ತೆರೆಯದೆ ಹೈಡ್ರಾಮ ನಡೆದ ಘಟನೆ ಕೂಡ ಕಂಡುಬಂದಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಅಧಿಕಾರಿಗಳ ತಂಡ ಮನೆ ಮುಂದೆ ಕಾಯಬೇಕಾದ ಪರಿಸ್ಥಿತಿ ಉಂಟಾಯಿತು. ಲೋಕಾಯುಕ್ತ ಡಿವೈಎಸ್‌ಪಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

ಮೈಸೂರಿನಲ್ಲಿ ಜಲಮಂಡಳಿಯ ಎಇಇ ಹಾಗೂ ಇಇ (ಇನ್‌ಚಾರ್ಜ್) ಆಶಿಫ್ ಇಕ್ಬಾಲ್ ಅವರ ನಿವಾಸದಲ್ಲಿ ಪರಿಶೀಲನೆ ನಡೆಯುತ್ತಿದೆ. ವಿಜಯಪುರದಲ್ಲಿ ಕೃಷ್ಣಭಾಗ್ಯ ಜಲ ನಿಗಮದ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ. ಅವರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಸಿದ್ದಾರೆ.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಅವರ ಮನೆಗಳ ಜೊತೆಗೆ ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ಅವರ ಸಹೋದರ ಭೀಮಸಿಂಗ್ ನಾಯಕ್ ಅವರ ಮನೆ ಮೇಲೂ ದಾಳಿ ನಡೆದಿದೆ. ಭೀಮಸಿಂಗ್ ನಾಯಕ್ ಅವರು ಬಾಗಲಕೋಟೆ ಡಿಎಆರ್‌ನಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಬಾಗಲಕೋಟೆ ತಾಲೂಕಿನ ಬಿಲ್ ಕೆರೂರು ಗ್ರಾಮದಲ್ಲಿರುವ ಅವರ ಮೂಲ ನಿವಾಸದಲ್ಲಿಯೂ ಪರಿಶೀಲನೆ ನಡೆಸಲಾಗಿದೆ.

ಒಟ್ಟಾರೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ನಡೆದ ಈ ದಾಳಿಯ ವೇಳೆ ಅಧಿಕಾರಿಗಳು ಮಹತ್ವದ ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

Ramesh Babu

Journalist

Recent Posts

ಬಿರಿಯಾನಿಗಾಗಿ ಮಿಡ್ ನೈಟ್ ರೈಡ್ ಬಂದವರು ದುರ್ಮರಣ

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು…

5 minutes ago

ಘಾಟಿ ಸುಬ್ರಹ್ಮಣ್ಯ ದೇಗುಲ ಸಮೀಪ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ...…

5 hours ago

111.355 ಕೆ.ಜಿ ಗಾಂಜಾ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…

21 hours ago

ಏ.12ಕ್ಕೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ…

21 hours ago

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಪ್ರಾರಂಭಕ್ಕೆ ಕ್ರಮಕೈಗೊಳ್ಳಲು ಶಾಸಕ ಧೀರಜ್ ಮುನಿರಾಜ್ ಮನವಿ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು…

22 hours ago

ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಗಂಡ ಕಿರುಕುಳ ಆರೋಪ: ಗಂಡನ ವಿರುದ್ಧ ಹೆಂಡತಿ ದೂರು

ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ...…

24 hours ago