ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14 ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ನೇಮಕ: ಬೆಂ.ಗ್ರಾಮಾಂತರಕ್ಕೆ ಯಾರು ಗೊತ್ತಾ…?

ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಚುರುಕುಗೊಳಿಸಿ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14 ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ನೇಮಿಸಿ ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಡಾ.ಸಲೀಂ ಅವರು ಆದೇಶ ಮಾಡಿದ್ದಾರೆ.

 ಡಿಜಿ ಮತ್ತು ಐಜಿಪಿ ಅವರ ಪರವಾಗಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ) ಮತ್ತು ಪೊಲೀಸ್ ಮಹಾನಿರೀಕ್ಷಕರ (ಐಜಿಪಿ) ಶ್ರೇಣಿಯ 14 ಹಿರಿಯ ಅಧಿಕಾರಿಗಳನ್ನು ಜಿಲ್ಲಾವಾರು ನೇಮಿಸಲಾಗಿದ್ದು, 2025 ರ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ತಮಗೆ ವಹಿಸಲಾದ ಜಿಲ್ಲೆಗಳಿಗೆ ಭೇಟಿ ನೀಡಿ ಎರಡು ದಿನಗಳ ಕಾಲ ತಪಾಸಣೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ.

ಅಧಿಕಾರಿಗಳು – ಪರಿಶೀಲನೆಗೆ ನೀಡಿದ ಜಿಲ್ಲೆಗಳು

ಅಲೋಕ್ ಕುಮಾರ್, ಎಡಿಜಿಪಿ ಬೆಳಗಾವಿ ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ

ಆರ್. ಹಿತೇಂದ್ರ, ಎಡಿಜಿಪಿ ಹುಬ್ಬಳ್ಳಿ-ಧಾರವಾಡ ನಗರ, ಬೆಳಗಾವಿ ಜಿಲ್ಲೆ

ಬಿ.ಕೆ. ಸಿಂಗ್, ಎಡಿಜಿಪಿ ಮಂಗಳೂರು ನಗರ, ಮಂಡ್ಯ ಜಿಲ್ಲೆ

ಪಿ. ಹರಿಶೇಖರನ್, ಎಡಿಜಿಪಿ ಕಲಬುರಗಿ ನಗರ, ದಾವಣಗೆರೆ ಜಿಲ್ಲೆ

ಎಸ್. ಮುರುಗನ್, ಎಡಿಜಿಪಿ ಉಡುಪಿ, ದಕ್ಷಿಣ ಕನ್ನಡ

ಸೌಮೇಂದು ಮುಖರ್ಜಿ ಕೋಲಾರ, ತುಮಕೂರು ಜಿಲ್ಲೆ

ಎಂ. ಚಂದ್ರಶೇಖರ್, ಎಡಿಜಿಪಿ ಮೈಸೂರು ನಗರ, ಹಾಸನ ಜಿಲ್ಲೆ

ಡಾ. ತ್ಯಾಗರಾಜನ್ ಕೆ, ಐಜಿಪಿ ಯಾದಗಿರಿ, ಗದಗ ಜಿಲ್ಲೆ

ಚಂದ್ರ ಗುಪ್ತ, ಐಜಿಪಿ ಹಾವೇರಿ, ಬಳ್ಳಾರಿ ಜಿಲ್ಲೆ

ವಿಕಾಶ್ ಕುಮಾರ್ ವಿಕಾಶ್ ಐಜಿಪಿ ಚಿಕ್ಕಮಗಳೂರು, ಧಾರವಾಡ ಜಿಲ್ಲೆ

ಸಂದೀಪ್ ಪಾಟೀಲ್, ಐಜಿಪಿ ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆ

ಎನ್. ಸತೀಶ್ ಕುಮಾರ್ ಐಜಿಪಿ ಮೈಸೂರು ಜಿಲ್ಲೆ, ಕೊಡಗು ಜಿಲ್ಲೆ

ದೇವಜ್ಯೋತಿ ರೇ ಐಜಿಪಿ ಕಲಬುರಗಿ, ಬೀದರ್ ಜಿಲ್ಲೆ

ವೈ.ಎಸ್. ರವಿ ಕುಮಾರ್, ಐಜಿಪಿ ಕೊಪ್ಪಳ, ಕೆ.ಜಿ.ಎಫ್. ಜಿಲ್ಲೆ

Ramesh Babu

Journalist

Recent Posts

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

29 minutes ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

5 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

5 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

6 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

9 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

21 hours ago