ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಫೋನ್ ನಂಬರ್ ಪ್ರದರ್ಶನ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್.
ಪ್ರತಿ ಪೊಲೀಸ್ ಠಾಣೆಯಲ್ಲಿ ಜಿಲ್ಲೆಯ ಎಸ್ ಪಿ, ಎಎಸ್ಪಿ, ಡಿವೈಎಸ್ ಪಿ ಫೋನ್ ನಂಬರ್ ನ್ನು ಸಾರ್ವಜನಿಕರಿಗೆ ಕಾಣುವಂತೆ ನಾಮಫಲಕದಲ್ಲಿ ಹಾಕಬೇಕು. ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಕಮಿಷನರ್, ಡಿಸಿಪಿ, ಎಸಿಪಿಗಳ ಫೋನ್ ನಂಬರ್ ನ್ನು ಕನ್ನಡ ಹಾಗೂ ಇಂಗ್ಲೀಷ್ ಎರಡು ಭಾಷೆಯಲ್ಲಿ ಹಾಕಲು ಸೂಚನೆ ನೀಡಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್.
ಈ ಠಾಣೆಯಲ್ಲಿ ಯಾವುದೇ ದೂರು ಸ್ವೀಕಾರ ಮಾಡದಿದ್ದಲ್ಲಿ ಹಿರಿಯ ಅಧಿಕಾರಿಗಳನ್ನ ಸಂಪರ್ಕಿಸಿ ಎಂದು ಫಲಕವಿರುವ ವರದಿಯನ್ನು ಎರಡು ದಿನದಲ್ಲಿ ಡಿಜಿ ಕಚೇರಿ ಕಳಿಸಲು ಖಡಕ್ ಸೂಚನೆ ನೀಡಲಾಗಿದೆ.
ಫಲಕದಲ್ಲಿ ಕಮಿಷನರ್, ಎಸ್ ಪಿಗಳು, ವ್ಯಾಪ್ತಿಯ ಎಲ್ಲ ಅಧಿಕಾರಿಗಳ ಫೋನ್ ನಂಬರ್ ಕಡ್ಡಾಯ ಹಾಕಲು ಸೂಚನೆ.