ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ(CS) ಡಾ.ಶಾಲಿನಿ ರಜನೀಶ್​(IAS) ನೇಮಕ

ಕರ್ನಾಟಕ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ(CS) ಡಾ.ಶಾಲಿನಿ ರಜನೀಶ್​(IAS) ಅವರನ್ನು ನೇಮಕ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್​.ಕೆ ಪಾಟೀಲ್​ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ. ಪಾಟೀಲ್‌ ಅವರು ಶಾಲಿನಿ ರಜನೀಶ್‌ ಅವರ ನೇಮಕದ ಕುರಿತು ಮಾಹಿತಿ ನೀಡಿದರು.

ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.

ಶಾಲಿನಿ ರಜನೀಶ್‌ ಅವರು ಸದ್ಯ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ. ರಜನೀಶ್‌ ಗೋಯಲ್‌ ಅವರ ನಂತರ ಜ್ಯೇಷ್ಠತೆಯ ಆಧಾರದ ಮೇಲೆ ರೇಸ್‌ನಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಸೇಠ್‌ ಹಾಗೂ ಶಾಲಿನಿ ರಜನೀಶ್‌ ಅವರಿದ್ದರು. ಈಗ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರಿಗೇ ಮಣೆ ಹಾಕಿದೆ. ಇವರು 2027ರ ಜೂನ್‌ಗೆ ಇವರು ನಿವೃತ್ತಿ ಹೊಂದಲಿದ್ದಾರೆ.

Ramesh Babu

Journalist

Recent Posts

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…

28 minutes ago

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

4 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳಲ್ಲಿ ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

5 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

12 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

13 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

14 hours ago