ನಾಡು, ನುಡಿಯ ವಿಷಯದಲ್ಲಿ ರಾಜಿಯಿರದ ಬದ್ಧತೆ ನನ್ನದು. ಕರ್ನಾಟಕ, ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಷಯದಲ್ಲಿ ನಾವು ಕೊಟ್ಟ ಮಾತಿಗೆ ತಪ್ಪದೆ ನುಡಿದಂತೆ ನಡೆಯುವವರು ಎಂಬುದನ್ನು ಮತ್ತೊಮ್ಮೆ ಸಾಧಿಸಿ ತೋರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಹಾಗೂ ಗ್ರಾಹಕ ಉತ್ಪನ್ನಗಳ ಮೇಲೆ ಅವುಗಳ ಹೆಸರು ಮತ್ತು ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರೆ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಿ ಆದೇಶಿಸಲಾಗಿದೆ ಎಂದು ಹೇಳಿದರು.
ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ- 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ.
ಈ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದೆಂದು ತಿಳಿಸಲಾಗಿದೆ.
ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಲಾಗಿದೆ.
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…