ರಾಜ್ಯದ ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆ ಮೇಲಿನ ರಿಯಾಯಿತಿ ಜೂನ್ 30 ರವರೆಗೆ ವಿಸ್ತರಣೆ

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಮೇಲಿನ ಶೇಕಡ 5 ರಷ್ಟು ರಿಯಾಯಿತಿ ಕಾಲಾವಧಿಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತೆರಿಗೆ ಪಾವತಿಸಲು ಅನುಕೂಲವಾಗುವಂತೆ ಮುಂದಿನ ಎರಡು ತಿಂಗಳು ಅಂದರೆ 30/6/2025 ವರೆಗೆ ವಿಸ್ತರಿಸಿ ಸರ್ಕಾರದ ಆದೇಶ ಸಂಖ್ಯೆ ಎಂ ಎಂ ಇ 2025 9/52025 ರಂದು ಆದೇಶವನ್ನು ಕರ್ನಾಟಕ ರಾಜ್ಯ ನಗರ ಅಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ನಾಗೇಶ್. ಕೆ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಆರ್ಥಿಕ ವರ್ಷದ ಪ್ರಾರಂಭವಾದ 30 ದಿನದ ಒಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇಕಡ ಐದರಷ್ಟು ರಿಯಾಯಿತಿ ನೀಡಲು ಆದೇಶ ಹೊರಡಿಸಲಾಗಿತ್ತು. ಆದರೆ ಆಸ್ತಿ ತೆರಿಗೆ ಪಾವತಿಸುವಲ್ಲಿ ಹೆಚ್ಚಿನ ಆಸಕ್ತಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಟಿ ನಲ್ಲಿ 2025 26 ಸಾಲಿಗೆ ಮಾತ್ರ ಅನ್ವಯವಾಗುವಂತೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗುತ್ತದೆ ಎಂದು ಅಧೀನ ಕಾರ್ಯದರ್ಶಿಗಳು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *