ಬೆಂಗಳೂರು ನಗರ ಸೇರಿದಂತೆ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ಬೀಸುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ರಾಯಚೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು- ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಜನತೆಯಲ್ಲಿ ಮನವಿ ಮಾಡಿದೆ.
ಈಗಾಗಲೇ ಮೋಡ ಕವಿದ ವಾತಾವರಣವಿದ್ದು, ಭಾರೀ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.