Categories: ಹವಾಮಾನ

ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದಲ್ಲದೇ ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆ ಆಲಿಕಲ್ಲು ಮಳೆ ಆಗಬಹುದು ಎಂದು ಹೇಳಲಾಗಿದೆ.

ಗುರುವಾರ ಗರಿಷ್ಠ ತಾಪಮಾನ 38.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇಂದು ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಈ ಹಿನ್ನೆಲೆ ಉತ್ತರ ಒಳನಾಡಿನ ಗದಗ, ಬೆಳಗಾವಿ, ಕೊಪ್ಪಳ, ಹಾವೇರಿ, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು,ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

8 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago