ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದಲ್ಲದೇ ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆ ಆಲಿಕಲ್ಲು ಮಳೆ ಆಗಬಹುದು ಎಂದು ಹೇಳಲಾಗಿದೆ.
ಗುರುವಾರ ಗರಿಷ್ಠ ತಾಪಮಾನ 38.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂದು ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಈ ಹಿನ್ನೆಲೆ ಉತ್ತರ ಒಳನಾಡಿನ ಗದಗ, ಬೆಳಗಾವಿ, ಕೊಪ್ಪಳ, ಹಾವೇರಿ, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು,ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…