ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.
17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.
ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ 06 ಮಾರ್ಚ್ 2026ರಂದು ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ.
ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ.
ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…