ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿರುವುದು ವಿಶೇಷವಾಗಿತ್ತು.

ಲೋಕಭವನದ ಗಾಜಿನ‌ಮನೆಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಪ್ರಮಾಣ ವಚನ ಸ್ವೀಕಾರದ ನಂತರ, 12 ಕ್ಯಾಬಿನೆಟ್ ಸಚಿವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.

ಸಚಿವರಾಗಿ ಕೆ.ಎಚ್ ಮುನಿಯಪ್ಪ, ಕೆ.ಜೆ ಜಾರ್ಜ್, ಎಂ.ಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಈ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ತೆಲಂಗಾಣ ಪಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್, ಹಿಮಾಲಯ ಪ್ರದೇಶ ಸಿಎಂ ಸುಕ್ವಿಂದರ್ ಸಿಂಗ್ ಸುಕು ಸೇರಿದಂತೆ ಇತರೆ ಪ್ರಮುಖರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!