ಡಿ.ಕೆ ಶಿವಕುಮಾರ್ ಅವರನ್ನು ಮುಂದಿನ 2 ವರ್ಷಗಳ ಕಾಲ ಶಾಸಕಾಂಗ ಪಕ್ಷದ ನಾಯಕ ಎಂದು ಘೋಷಣೆ ಮಾಡಲಾಗಿದೆ. ಈ ಮೂಲಕ ಅಧಿಕೃತವಾಗಿ ಡಿ.ಕೆ ಶಿವಕುಮಾರ್ ಸಿಎಂ ಹುದ್ದೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಸಿಎಲ್ ಪಿ ನಾಯಕ ಡಿ.ಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನ ನೀಡಿದ್ದಾರೆ.
ಇನ್ನೊಂದೆಡೆ ನೂತನ ಸಿಎಂ ಪ್ರಮಾಣ ವಚನಕ್ಕೆ ದಿನಾಂಕ, ಸಮಯ ಕೂಡ ನಿಗದಿಯಾಗಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸ್ಥಾನಕ್ಕೆ ಗುರುವಾರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಶನಿವಾರ ವಿಧಾನಸೌಧದಲ್ಲಿ ಸಂಜೆ 5 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ನೂತನ ನಾಯಕ ಆಯ್ಕೆ ನಡೆಯಿತು. ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು ಆಗಮಿಸಿ ಔಪಚಾರಿಕವಾಗಿ ತಮ್ಮ ಅಭಿಪ್ರಾಯ ತಿಳಿಸಿದರು. ಪಕ್ಷದ ಕಡೆಯಿಂದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು.
ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ದಿನಾಂಕ ನಿಗದಿಯಾಗಿದೆ. ಜೂನ್ 3, ಬುಧವಾರ ಸಂಜೆ 4.05 ಕ್ಕೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…