Categories: ಲೇಖನ

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಭಿನ್ನಾಭಿಪ್ರಾಯ…

ಹಿಂದೆಯೂ ಈ ರೀತಿಯ ಭಿನ್ನಾಭಿಪ್ರಾಯಗಳು ಇದ್ದವು. ಆಗಾಗ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ ಇದನ್ನು ಒಂದು ಹಂತಕ್ಕೆ ನಿಯಂತ್ರಿಸುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿರೇಕವನ್ನು ಮುಟ್ಟಿದೆ. ಈ ನಡುವೆ ಕೆಲವು ರಾಜ್ಯಗಳಲ್ಲಿ ಸ್ಪೀಕರ್ ಅವರ ಹುದ್ದೆಯೂ ಸಹ ಇದೇ ರೀತಿ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ……

ಸಂವಿಧಾನದಲ್ಲಿ ಕಾನೂನುಗಳನ್ನು ಸ್ಪಷ್ಟವಾಗಿ ರಚಿಸಿದ್ದರೂ ಸಹ ” ವಿವೇಚನಾ ಅಧಿಕಾರ ” ಎಂಬ ಪದ ಎಲ್ಲವನ್ನೂ ಅವರವರ ದೃಷ್ಟಿಕೋನಕ್ಕೆ ತಕ್ಕಂತೆ ಬಳಸಿಕೊಂಡು ವಿವಾದಗಳನ್ನು ಸೃಷ್ಟಿಸಿಕೊಳ್ಳಲಾಗಿದೆ. ಹಾಗೆಯೇ ಪಕ್ಷಪಾತದ ತೀರ್ಮಾನಗಳನ್ನು ಅವರವರ ಅನುಕೂಲಕ್ಕೆ ತಕ್ಕಂತೆ ತೆಗೆದುಕೊಳ್ಳಲಾಗುತ್ತಿದೆ…..

ವಾಸ್ತವದಲ್ಲಿ ಜನರಿಂದ ಆಯ್ಕೆಯಾದ ಮುಖ್ಯಮಂತ್ರಿಗಳಿಗೆ ಸಂಪೂರ್ಣ ಅಧಿಕಾರ ಇರುತ್ತದೆ. ಅವರು ಬಹುತೇಕ ಜನರಿಗೆ ಉತ್ತರದಾಯಿತ್ವ ಹೊಂದಿರುತ್ತಾರೆ. ಹಾಗೆಯೇ ಜನಪ್ರಿಯತೆಯ ನಡುವೆ ಕಾನೂನುಗಳು ಸಹ ಅಷ್ಟೇ ಮುಖ್ಯವಾಗುತ್ತದೆ. ಆ ಕಾನೂನುಗಳನ್ನು ಮೇಲ್ವಿಚಾರಣೆ ಮಾಡಲು ರಾಜ್ಯಪಾಲರನ್ನು ನೇಮಿಸಲಾಗಿರುತ್ತದೆ. ಎರಡು ಕೂಡ ತಮ್ಮ ತಮ್ಮ ಕರ್ತವ್ಯಗಳನ್ನು ಸರಿಯಾಗಿ ಮಾಡಿಕೊಂಡು ಹೋದರೆ ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ರಾಜಕೀಯ ಪಕ್ಷಗಳು ಅಧಿಕಾರದ ದಾಹಕ್ಕೆ ಒಳಗಾಗಿ ಜನಪ್ರಿಯತೆಯನ್ನು, ಕಾನೂನನ್ನು ಅದಕ್ಕಾಗಿ ಬಳಸಿ ಕೊಂಡಾಗ ಈ ವಿವಾದ ಸೃಷ್ಟಿಯಾಗುತ್ತದೆ……

ಇಲ್ಲಿ ನಾವುಗಳು ಮುಕ್ತ ಮನಸ್ಸಿನಿಂದ ನೋಡಬೇಕಾಗಿರುವುದು ಜನಪ್ರಿಯತೆ ಅಥವಾ ಬಹುಮತವೇ ಅಂತಿಮ ಸತ್ಯವಲ್ಲ. ಒಂದು ಸರ್ಕಾರ ಜನಪ್ರಿಯವಾಗಿದೆ ಎಂದ ತಕ್ಷಣ ಐದು ವರ್ಷದ ಅವಧಿಯಲ್ಲಿ ತಮಗಿಷ್ಟ ಬಂದಂತೆ ಆಡಳಿತ ಮಾಡಲು ಸಾಧ್ಯವಿಲ್ಲ. ಅದಕ್ಕೆ ಕಾನೂನಿನ ಇತಿಮಿತಿಗಳು ಇದ್ದೇ ಇರುತ್ತದೆ. ಒಂದು ವ್ಯವಸ್ಥೆ ದೀರ್ಘಕಾಲ ಕ್ರಮಬದ್ಧವಾಗಿ ಮುನ್ನಡೆಯಲು ನೀತಿ ನಿಯಮಗಳು ಬೇಕೇ ಬೇಕು….

ಹಾಗೆಯೇ ನೀತಿ ನಿಯಮಗಳೇ ಸಂಪೂರ್ಣ ಪರಮಾಧಿಕಾರವೂ ಅಲ್ಲ. ನೀತಿ ನಿಯಮಗಳನ್ನು ರೂಪಿಸಿರುವುದು ಜನರ ಕಲ್ಯಾಣಕ್ಕಾಗಿಯೇ ಹೊರತು ನಿಯಮಗಳಿಗಾಗಿಯೇ ನಾವಿಲ್ಲ, ನಮಗಾಗಿ ನಿಯಮಗಳಿರುವುದು. ಆ ಕೆಲವು ಅಂಶಗಳನ್ನೇ ಉಪಯೋಗಿಸಿಕೊಂಡು ಬಹುಮತದಿಂದ ಆಯ್ಕೆಯಾದ ಸರ್ಕಾರಗಳಿಗೆ ತೊಂದರೆ ಕೊಡುವುದು ಕೂಡ ತಪ್ಪಾಗುತ್ತದೆ….

ಪಶ್ಚಿಮ ಬಂಗಾಳ, ದೆಹಲಿ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ ಹೀಗೆ ಹಲವಾರು ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಅಲ್ಲಿನ ಮುಖ್ಯಮಂತ್ರಿಗಳ ನಡುವೆ ಸಂಘರ್ಷ ನಡೆಯುತ್ತಲೇ ಇದೆ. ನಿಜಕ್ಕೂ ಸಂವಿಧಾನದಲ್ಲಿ ಏನಾದರೂ ಲೋಪಗಳಿವೆಯೇ ಎಂದು ಪರಿಶೀಲಿಸಿದಾಗ ಖಂಡಿತ ಇಲ್ಲ, ಈ ವಿವಾದಗಳು ಕೃತಕ ಸೃಷ್ಟಿ. ಏಕೆಂದರೆ ಒಂದೇ ಪಕ್ಷದ ಆಡಳಿತಗಳು ಎರಡೂ ಕಡೆ ಇರುವಾಗ ಸಾಮಾನ್ಯವಾಗಿ ಯಾವುದೇ ವಿವಾದಗಳಾಗುವುದಿಲ್ಲ. ಎರಡು ವಿಭಿನ್ನ ಪಕ್ಷಗಳು ಆಯ್ಕೆಯಾದಾಗ ಮಾತ್ರ ಈ ಸಮಸ್ಯೆ ತಲೆದೋರುತ್ತದೆ. ಅಂದರೆ ಇದು ಬೇಕಂತಲೇ ಸಮಸ್ಯೆ ಉಂಟುಮಾಡುವ ಪ್ರಕ್ರಿಯೆಗಳು ಎಂಬುದು ಸ್ಪಷ್ಟವಾಗುತ್ತದೆ…..

ಮಾಧ್ಯಮಗಳು ಮತ್ತು ರಾಜಕೀಯ ಆಸಕ್ತರು ಇದನ್ನು ಸಮಗ್ರವಾಗಿ ನೋಡದೆ ಅವರು ಸರಿ ಇವರು ಸರಿ, ಅವರು ತಪ್ಪು ಇವರ ತಪ್ಪು ಎಂದು ವಿಮರ್ಶೆಗೆ ಇಳಿಯುತ್ತಾರೆ. ಇಲ್ಲಿ ಸರಿ ತಪ್ಪುಗಳ ಪ್ರಶ್ನೆಯೇ ಬರುವುದಿಲ್ಲ. ಇವೆಲ್ಲವೂ ಉದ್ದೇಶಪೂರ್ವಕ ಚಟುವಟಿಕೆಗಳು. ಮುಖ್ಯಮಂತ್ರಿ ಮತ್ತು ರಾಜ್ಯಪಾಲರು ತುಂಬಾ ಅಪರಿಚಿತರು ಅಥವಾ ಶತ್ರುಗಳೇನು ಅಲ್ಲ. ಈಗಿನ ಕಾಲದಲ್ಲಿ ಸಂಪರ್ಕದ ಕೊರತೆಯೂ ಇರುವುದಿಲ್ಲ. ಯಾವಾಗ ಬೇಕಾದರೂ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಕುಳಿತು, ಚರ್ಚಿಸಿ, ಮಾತನಾಡಿ ವಿವಾದ ಬಗೆಹರಿಸಿಕೊಳ್ಳಬಹುದು ಅಥವಾ ನೈತಿಕ ಮತ್ತು ಕಾನೂನಿನ ಜವಾಬ್ದಾರಿ ನಿರ್ವಹಿಸಬಹುದು. ಆದರೆ ಅದು ಸಾಧ್ಯವಾಗುತ್ತಿಲ್ಲ. ಬೇಕಂತಲೇ ತೊಂದರೆ ಕೊಡುತ್ತಾರೆ……

ಇಂತಹ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ತುಂಬಾ ಕಷ್ಟ. ಏಕೆಂದರೆ ಸಮಸ್ಯೆಯೇ ಇಲ್ಲದ ಕಡೆ ಸಮಸ್ಯೆಯನ್ನು ಹುಟ್ಟು ಹಾಕಲಾಗುತ್ತದೆ….

ಇಲ್ಲಿ ನಾವು ಮುಖ್ಯವಾಗಿ ಚರ್ಚಿಸಬೇಕಾಗಿರುವುದು ಪ್ರಜಾಪ್ರಭುತ್ವದ ಯಶಸ್ಸಿನ ಮಾನದಂಡಗಳು ಮತ್ತು ಗುಣಮಟ್ಟ. ಎಲ್ಲಿ ಬುದ್ದಿವಂತ, ಪ್ರಾಮಾಣಿಕ ಮತದಾರರು ಮತ್ತು ಚುನಾವಣಾ ಅಭ್ಯರ್ಥಿಗಳು ಇರುತ್ತಾರೋ ಅಲ್ಲಿ ಸಹಜವಾಗಿಯೇ ಪ್ರಜಾಪ್ರಭುತ್ವ ಉತ್ತಮ ಗುಣಮಟ್ಟ ಹೊಂದಿರುತ್ತದೆ. ಆದರೆ ಎಲ್ಲಿ ವ್ಯಕ್ತಿಗಳು ಅಥವಾ ಮತದಾರರು ಮತ್ತು ಅಭ್ಯರ್ಥಿಗಳು ಅಪ್ರಬುದ್ಧ, ಅಪ್ರಾಮಾಣಿಕ, ಅದಕ್ಷ, ಭ್ರಷ್ಟ, ಧರ್ಮಾಂಧ, ಜಾತಿವಾದಿಗಳು ಇರುತ್ತಾರೋ ಅಲ್ಲಿ ಪ್ರಜಾಪ್ರಭುತ್ವ ಕೆಳಹಂತಕ್ಕೆ ಇಳಿಯುತ್ತದೆ…..

ಸಮಸ್ಯೆಯ ಮೂಲ ಇರುವುದೇ ಇಲ್ಲಿ. ಆದ್ದರಿಂದಲೇ ಒಂದು ದೇಶದ ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ವ್ಯಕ್ತಿಗಳ ಗುಣಮಟ್ಟ ಉತ್ತಮವಾಗಿರಬೇಕು, ಅಂದರೆ ಮೌಲ್ಯಯುತವಾಗಿರಬೇಕು. ನಮ್ಮೆಲ್ಲ ಕಾರ್ಯಯೋಜನೆಗಳು, ಚಿಂತನೆಗಳು, ವ್ಯಕ್ತಿತ್ವ ನಿರ್ಮಾಣದ ಕಡೆಗಿರಲಿ ಎಂದು ಆಶಿಸುತ್ತಾ……

ಆಗ ಮಾತ್ರ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ಅಭಿವೃದ್ಧಿ ಹೊಂದಿ ಜನರ ಜೀವನಮಟ್ಟ ಸುಧಾರಿಸಬಹುದು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

5 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

15 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

17 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

22 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

24 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago