ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣ ಓದದೆ, ತಾವೇ ಸಿದ್ಧಪಡಿಸಿದ ಭಾಷಣ ಓದಿ ಸಂವಿಧಾನದ ವಿಧಿ ಉಲ್ಲಂಘನೆ- ಸಿಎಂ ಸಿದ್ದರಾಮಯ್ಯ ಕಿಡಿ

ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡುವ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯಾ ಸನ್ಮಾನ್ಯ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ 176 ಮತ್ತು 163 ರಂತೆ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದ್ದು, ರಾಜ್ಯಪಾಲರು ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವಂತಿಲ್ಲ. ಇಂದು ವರ್ಷದ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ರದ್ದುಪಡಿಸಿ, ವಿಬಿಜಿ ರಾಮ್ ಜಿ ( ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂಬ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧವಿದೆ ಎಂದರು.

ಮೊದಲನೆಯದಾಗಿ ಕಾಯ್ದೆಯಿಂದ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯಲಾಗಿದೆ. 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ಸಂವಿಧಾನ ನಿರ್ದೇಶನಗಳಂತೆ ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಉದ್ಯೋಗದ ಹಕ್ಕು ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಈ ಕಾಯ್ದೆಯಿಂದ ದಲಿತರು, ಕಾರ್ಮಿಕರು ಮತ್ತು ಮಹಿಳೆಯರು ಮತ್ತು ಸಣ್ಣ ರೈತರಿಗೆ ಅನುಕೂಲವಾಗಿತ್ತು ಎಂದು ಹೇಳಿದರು.

ಹೊಸ ಕಾಯ್ದೆಯಲ್ಲಿ ವಿಶೇಷವಾಗಿ ಶೇ.53 ಮಹಿಳೆಯರು, ಶೇ.28 ದಲಿತರಿದ್ದು, ಇವರಿಗೆ ಉದ್ಯೋಗದ ಖಾತ್ರಿಯೇ ಇಲ್ಲ. ಅವರು ಅಪೇಕ್ಷಿಸಿದ ಸ್ಥಳದಲ್ಲಿ, ಸಣ್ಣ ರೈತರು ಅವರ ಜಮೀನುಗಳಲ್ಲಿಯೇ ಕೆಲಸ ಮಾಡುವ ಅವಕಾಶವನ್ನು ಮುಂಚಿನ ಕಾಯ್ದೆ ಕಲ್ಪಿಸಿತ್ತು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಈ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರ ನಿರ್ಧರಿಸುವ ಕಡೆಗಳಲ್ಲಿ ಬಡ ಕಾರ್ಮಿಕರು ಕೆಲಸ ಮಾಡಬೇಕಾಗಿದೆ. ಹಿಂದಿನ ಕಾಯ್ದೆಯಲ್ಲಿ ವರ್ಷದ 365 ದಿನಗಳಲ್ಲಿ ಯಾವಾಗಾಲಾದರೂ ಕೆಲಸ ಕೊಡಬಹುದಾಗಿದ್ದು, ಅದು ಸರ್ಕಾರದ ಕರ್ತವ್ಯವಾಗಿತ್ತು. ಅಲ್ಲದೇ, ಈ ಬಗ್ಗೆ ಕ್ರಿಯಾಯೋಜನೆ ರಚಿಸುವ ಹಕ್ಕು ಆಯಾ ಗ್ರಾಮಸಭೆ ಮತ್ತು ಪಂಚಾಯ್ತಿಗಳಿಗೆ ಅವಕಾಶವಿತ್ತು. ಆದರೆ ಈ ಹೊಸ ಕಾಯ್ದೆಯಲ್ಲಿ ಈ ಅವಕಾಶವನ್ನು ರದ್ದು ಪಡಿಸಲಾಗಿದೆ ಎಂದು ತಿಳಿಸಿದರು.

ರಾಜ್ಯಪಾಲರು ಹೊಸ ಕಾಯ್ದೆಯನ್ನು ಉದ್ದೇಶಪೂರ್ವಕವಾಗಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯವಿಲ್ಲ ಹಾಗೂ ಕೇಂದ್ರದ ಕಾಯ್ದೆಗಳನ್ನು ಸಹಕರಿಸಲೇಬೇಕೆಂಬ ನೀತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿ ನಮಗೆ ಅದರ ಬಗ್ಗೆ ವಿರೋಧವಿದ್ದು, ಈ ವಿಚಾರಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು ಎಂದು ಹೇಳಿದರು.

ಮನರೇಗಾ ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು ಹೊಸ ಕಾಯ್ದೆಯನ್ನು ರದ್ದುಗೊಳಿಸಬೇಕೆಂಬುದು ನಮ್ಮ ಉದ್ದೇಶ. ನಮ್ಮ ಪಕ್ಷ ಮತ್ತು ಸರ್ಕಾರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಮನರೇಗಾ ಮರುಸ್ಥಾಪನೆ ಮಾಡುವವರೆಗೆ ನಮ್ಮ ಹೋರಾಟ ನಿರಂತರವಾಗಿರಲಿದೆ. ಈ ಹಿಂದೆ ರೈತರ ವಿರೋಧಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ಸು ತೆಗೆದುಕೊಂಡಂತೆ, ಈ ಹೊಸ ಕಾಯ್ದೆಯನ್ನು ವಾಪಸ್ಸು ತೆಗೆದುಕೊಳ್ಳುವವರೆಗೆ ನಮ್ಮ ಹೋರಾಟ ನಡೆಯಲಿದೆ ಎಂದರು.

ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವ ಮೂಲಕ ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನದ ಕಲಂ 176 ಮತ್ತು 163 ರಂತೆ ಸಚಿವ ಸಂಪುಟ ಭಾಷಣವನ್ನು ಓದಲೇಬೇಕಾಗಿದ್ದು ವಾಸ್ತವ ಅಂಶ. ಇದು ಸಂವಿಧಾನ ಸ್ಥಾಪನೆಯಾದಾಗಿನಿಂದ ನಡೆದುಕೊಂಡು ಬಂದಿರುವ ಪದ್ಧತಿ, ರಾಜ್ಯಪಾಲರ ಈ ನಡೆ, ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಸಂವಿಧಾನಬದ್ಧವಾದ ವಿಚಾರದ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಇದನ್ನು ನಮ್ಮ ಪಕ್ಷ ಮತ್ತು ಸರ್ಕಾರ, ಶಾಸಕರು, ಎಂಎಲ್‌ಸಿ ಗಳು ಪ್ರತಿಭಟನೆ ಮೂಲಕ ವಿರೋಧಿಸುತ್ತೇವೆ. ಇಡೀ ರಾಜ್ಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರ ತಾವು ಮಾಡಿದ ತಪ್ಪನ್ನು ಮರೆಮಾಚಲು ರಾಜ್ಯಪಾಲರ ಕೈಯಲ್ಲಿ ಬೇರೆ ಭಾಷಣವನ್ನು ಓದಿಸಿದ್ದಾರೆ. ಇದು ಸಂವಿಧಾನ ಬಾಹಿರ ಕೃತ್ಯ. ರಾಜ್ಯಪಾಲರು ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ ಎಂದರು.

ಸರ್ಕಾರ ಸಿದ್ಧಪಡಿಸಿರುವ ಭಾಷಣದ ಪ್ರತಿಯನ್ನು ಎಲ್ಲ ಶಾಸಕರು ಎಂಎಲ್ ಸಿಗಳಿಗೆ ವಿತರಿಸಲಾಗಿದೆ. ಇದರ ಬಗ್ಗೆ ಚರ್ಚಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

Ramesh Babu

Journalist

Recent Posts

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

13 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

14 hours ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

23 hours ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

1 day ago

ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…

2 days ago

ರಘುನಾಥಪುರ ಬಳಿ ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…

2 days ago