ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಸೈಬರ್ ಕಳ್ಳರು. ನಕಲಿ ಫೇಸ್‌ಬುಕ್ ಖಾತೆ ತೆರೆದಿರುವ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸೈಬರ್ ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಹೆಸರು ಮತ್ತು ಫೊಟೋವನ್ನು ಬಳಸಿಕೊಂಡು ನಕಲಿ ಫೇಸ್‌ಬುಕ್ ಖಾತೆ ತೆರೆದಿದ್ದಾರೆ ಎನ್ನಲಾಗಿದೆ.
ದೂರು ದಾಖಲಿಸಿಕೊಂಡ ಸೈಬರ್ ಪೊಲೀಸರು ನಕಲಿ ಖಾತೆಯನ್ನು ಮುಚ್ಚಿದ್ದಾರೆ, ನಕಲಿ ಖಾತೆ ತೆರೆದಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.