ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಪಾಸಿಟಿವ್

ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕೃತ ಮಾಹಿತಿ ತಿಳಿದುಬಂದಿದೆ.

ಸದ್ಯ ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದ್ದು, ರಾಜಭವನದಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ರಾಜ್ಯಪಾಲರಿಗೆ ಕೋವಿಡ್-19 ಪಾಸಿಟಿವ್ ಹಿನ್ನೆಲೆಯಲ್ಲಿ ಮುಂದಿನ ಕೆಲ ದಿನಗಳ ಕಾಲ ರಾಜ್ಯಪಾಲರ ಭೇಟಿ ಹಾಗೂ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ರಾಜ್ಯಪಾಲರ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *