ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ದೇವನಹಳ್ಳಿ ತಾಲೂಕಿನ ಕೆಂಪತಿಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಿ. ಉಮಾ ಅವರು ಆಯ್ಕೆಯಾಗಿದ್ದಾರೆ. ಇನ್ನು ಪ್ರೌಢಶಾಲಾ ವಿಭಾಗದಲ್ಲಿ ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಶಿಕ್ಷಕ ನೀಲಕಂತ ಗಾವಂಕರ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ರಾಜ್ಯಾದ್ಯಂತ ಪ್ರಾಥಮಿಕ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಸೇರಿದಂತೆ ಒಟ್ಟು 31 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಪ್ರೌಢಶಾಲಾ ವಿಭಾಗದಲ್ಲಿ ಓರ್ವ ವಿಶೇಷ ಶಿಕ್ಷಕರೂ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಹಿಳಾ ಶಿಕ್ಷಕರಿಗೆ ವಿಶೇಷ ಗೌರವ ನೀಡುವ ಉದ್ದೇಶದಿಂದ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಅವರ ಹೆಸರಿನಲ್ಲಿ ಸೆಪ್ಟೆಂಬರ್ 5ರಂದು ನಡೆಯುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಪ್ರಶಸ್ತಿ ಪುರಸ್ಕೃತರಿಗೆ ಸರ್ಕಾರದ ಆದೇಶದಂತೆ ತಲಾ 25,000 ನಗದು ಪುರಸ್ಕಾರ ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಇಬ್ಬರು ಶಿಕ್ಷಕರು ರಾಜ್ಯಮಟ್ಟದ ಗೌರವಕ್ಕೆ ಪಾತ್ರರಾಗಿರುವುದು ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

38 minutes ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

4 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

16 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

22 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

23 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago