ರಾಜ್ಯಮಟ್ಟದ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳಿ- ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ರಿಂದ 27 ರ ವರೆಗೆ ರಾಜ್ಯ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಜಿಲ್ಲೆಯಲ್ಲಿರುವ ಉದ್ಯೋಗಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ವೀಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ಇಂದು ನಡೆದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಸರ್ಕಾರವು ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ. ಇದರ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ವ್ಯಾಪಕ ಪ್ರಚಾರ ನೀಡಿ, ಉದ್ಯೋಗಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಉದ್ಯೋಗಾಂಕ್ಷಿಗಳು ವೆಬ್ಸೈಟ್ ವಿಳಾಸ https://udyogamela.skillconnect.kaushalkar.com/candidateRegistration ಮೂಲಕ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳಿ ಎಂದು ಹೇಳಿದರು.

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 2023 ಡಿಸೆಂಬರ್ 26 ರಿಂದ‌ ಫೆಬ್ರವರಿ 14, 2024 ರ ವರೆಗೆ ದೇವನಹಳ್ಳಿ-348, ದೊಡ್ಡಬಳ್ಳಾಪುರ-475, ಹೊಸಕೋಟೆ-395, ನೆಲಮಂಗಲ-508 ಸೇರಿದಂತೆ ಒಟ್ಟು-1726 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ. ನೋಂದಣಿಯಾಗದ ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಿಕೊಳ್ಳಲು ಕ್ರಮ ವಹಿಸಿ ಎಂದರು.

ಪಿ.ಎಂ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 34,599 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ತಡಮಾಡದೆ ಅರ್ಜಿಗಳನ್ನು ಶೀಘ್ರ ಪರಿಶೀಲಿಸಿ ಮುಂದಿನ ತರಬೇತಿಗೆ ಕಳುಹಿಸಿ. ಪಿ.ಎಂ ವಿಶ್ವಕರ್ಮ ಯೊಜನೆ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಂಡು ಸಾರ್ವಜನಿಕರಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಗನ್ನಾಥ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಲಲಿತಾ ರೆಡ್ಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

14 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

14 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

21 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

21 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago