ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ರಿಂದ 27 ರ ವರೆಗೆ ರಾಜ್ಯ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಜಿಲ್ಲೆಯಲ್ಲಿರುವ ಉದ್ಯೋಗಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ವೀಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ಇಂದು ನಡೆದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಸರ್ಕಾರವು ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ. ಇದರ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ವ್ಯಾಪಕ ಪ್ರಚಾರ ನೀಡಿ, ಉದ್ಯೋಗಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಉದ್ಯೋಗಾಂಕ್ಷಿಗಳು ವೆಬ್ಸೈಟ್ ವಿಳಾಸ https://udyogamela.skillconnect.kaushalkar.com/candidateRegistration ಮೂಲಕ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳಿ ಎಂದು ಹೇಳಿದರು.
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 2023 ಡಿಸೆಂಬರ್ 26 ರಿಂದ ಫೆಬ್ರವರಿ 14, 2024 ರ ವರೆಗೆ ದೇವನಹಳ್ಳಿ-348, ದೊಡ್ಡಬಳ್ಳಾಪುರ-475, ಹೊಸಕೋಟೆ-395, ನೆಲಮಂಗಲ-508 ಸೇರಿದಂತೆ ಒಟ್ಟು-1726 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ. ನೋಂದಣಿಯಾಗದ ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಿಕೊಳ್ಳಲು ಕ್ರಮ ವಹಿಸಿ ಎಂದರು.
ಪಿ.ಎಂ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 34,599 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ತಡಮಾಡದೆ ಅರ್ಜಿಗಳನ್ನು ಶೀಘ್ರ ಪರಿಶೀಲಿಸಿ ಮುಂದಿನ ತರಬೇತಿಗೆ ಕಳುಹಿಸಿ. ಪಿ.ಎಂ ವಿಶ್ವಕರ್ಮ ಯೊಜನೆ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಂಡು ಸಾರ್ವಜನಿಕರಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಗನ್ನಾಥ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಲಲಿತಾ ರೆಡ್ಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…