ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಜನತಾ ದರ್ಶನ ನಡೆಸಲಾಯಿತು. ಜನರ ಅಹವಾಲು ಆಲಿಸಿ, ಸಕಾಲದಲ್ಲಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಇದೇ ವೇಳೆ ನರಸಿಂಹಮೂರ್ತಿ ಎಂಬವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬನವತಿ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದು, ಖಾತೆ ಮಾಡಿಕೊಟ್ಟಿಲ್ಲ ಎಂದು ಸಿಎಂ ಅವರಿಗೆ ಮನವಿ ಸಲ್ಲಿಸಿದರು. ಕೂಡಲೇ ಕ್ರಮ ವಹಿಸುವಂತೆ ಮುಖ್ಯಮಂತ್ರಿಯವರು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೆ ಸೂಚಿಸಿದರು.