ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ದೊಡ್ಡಬಳ್ಳಾಪುರ ವಿದ್ಯಾರ್ಥಿನಿಗೆ ಮುಖ್ಯಮಂತ್ರಿಗಳಿಂದ ಬಹುಮಾನ ವಿತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2023 ರ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಬಹುಮಾನ ವಿತರಿಸಿದರು.

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಮೀನಾ.ಎಂ ಅವರು ತೃತೀಯ ಸ್ಥಾನ ಪಡೆದುಕೊಂಡಿದ್ದರು. ಇವರಿಗೆ ಮುಖ್ಯಮಂತ್ರಿಗಳು ಬಹುಮಾನ ವಿತರಿಸಿದರು.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು. ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಥಮ ಸ್ಥಾನ-31 ಸಾವಿರ, ದ್ವಿತೀಯ-21 ಸಾವಿರ ಹಾಗೂ ತೃತೀಯ-11 ಸಾವಿರ ರೂ.ಗಳ ನಗದು ಪುರಸ್ಕಾರ ನೀಡಲಾಯಿತು.

ವಿಜೇತರ ವಿವರ: ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ-ಅನಿರುದ್ಧ ಮನೋಜ್, ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ,ಕೊಡಗು ಜಿಲ್ಲೆ, ದ್ವಿತೀಯ-ಹರ್ಷಿತ ಎನ್, ಸರ್ಕಾರಿ ಪ್ರೌಢಶಾಲೆ, ತುಂಗಣಿ, ಕನಕಪುರ ತಾ. ರಾಮನಗರ ಜಿಲ್ಲೆ, ತೃತೀಯ – ತೋಹಿದ್ ಅಹ್ಮದ್ ಲಾಡಜಿ, ಗೈಡ್ ಆಂಗ್ಲ ಮಾಧ್ಯಮ ಶಾಲೆ, ತಿಳವಳ್ಳಿ, ಹಾನಗಲ್ ತಾಲ್ಲೂಕು, ಹಾವೇರಿ ಜಿಲ್ಲೆ.

ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ-ಹೃತ್ಪೂರ್ವಕ್ ಕೆ.ಎಸ್. ಸಂತ ಮೈಕೇಲ್ ಕಾಲೇಜು, ಮಡಿಕೇರಿ ಕೊಡಗು ಜಿಲ್ಲೆ, ದ್ವಿತೀಯ-ಉದಯಕುಮಾರ್ ಎಂ.ಎಸ್. ಸರ್ಕಾರಿ ಪ.ಪೂ.ಕಾಲೇಜು ಮಂಡ್ಯ, ತೃತೀಯ-ಮೀನ ಎಂ, ಶ್ರೀಕೊಂಗಾಡಿಯಪ್ಪ ಪಿ.ಯು.ಕಾಲೇಜು, ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ

ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ-ದರ್ಶಿನಿ ಡಿ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿವಮೊಗ್ಗ, ದ್ವಿತೀಯ-ಕಾವ್ಯಾ ಚಿಪ್ಪಲಕಟ್ಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಗಲಕೋಟ, ತೃತೀಯ-ಕುಸುಮಾಬಾಯಿ ಆರ್,ಜೆಎಸ್‍ಎಸ್ ಕಲಾ ಕಾಲೇಜು ಮೈಸೂರು ಇವರು ವಿಜೇತರಾಗಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಗಳಾದ ಡಾ. ಕೆ.ವಿ.ತ್ರಿಲೋಕಚಂದ್ರ, ಆಯುಕ್ತರಾದ ಶ್ರೀ ಹೇಮಂತ್ ಎಂ‌.ನಿಂಬಾಳ್ಕರ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *