ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ರೈತರು ನೀರಾವರಿ ಬೆಳೆ ಬೆಳೆಯಲು ಸಮಯಕ್ಕೆ ಸರಿಯಾಗಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈಗ ಅಧಿವೇಶನ ಇರುವುದರಿಂದ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುವ ಸಮಯವನ್ನ ಹೆಚ್ಚು ಮಾಡಲಾಗಿದೆ. ರಾತ್ರಿ ಪಾಳಿಯಲ್ಲಿ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಿದರೆ ರೈತರಿಗೆ ಏನೂ ಪ್ರಯೋಜನ ಆಗುವುದಿಲ್ಲ. ಏಕೆಂದರೆ ಹಾವು, ಚಿರತೆ ಕಾಟ ಸೇರಿದಂತೆ ಇನ್ನಿತರೆ ಅನಾಹುತ ಅನುಭವಿಸುವ ಭಯದಲ್ಲಿ ರೈತರು ಇದ್ದಾರೆ. ಚಳಿಗಾಲದ ಅಧಿವೇಶನ ಇರುವ ಕಾರಣ ಬರದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ಹಣವನ್ನ ಮೊದಲ ಕಂತಿನಲ್ಲಿ ತಲಾ 2ಸಾವಿರ ಬಿಡುಗಡೆ ಮಾಡಲು ತೀರ್ಮಾನಿಸಿದ್ದಾರೆ. ಈ ತೀರ್ಮಾನ ವಿರೋಧ ಪಕ್ಷದ ಬಾಯಿ ಮುಚ್ಚಿಸುವುದಕ್ಕೆ ವಿನಾ ಬೇರೆನೂ ಇಲ್ಲ. ಈ ಹಣ ರೈತರಿಗೆ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದರು.
ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ, ರೈತರ ಪರ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಮಂತ್ರಿಗಳು ಕಾಳಜಿ ವಹಿಸುತ್ತಿಲ್ಲ. ಇದರ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು. ಬೆಳೆ ಪರಿಹಾರವನ್ನ ದುಪ್ಪಟ್ಟು ಮಾಡಬೇಕು, ಎರಡು ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡಬೇಕು, ಪಂಪ್ ಸೆಟ್ ಗಳಿಗೆ ನೀಡುವ ವಿದ್ಯುತನ್ನು ಹಗಲಿನಲ್ಲಿ ನೀಡಬೇಕು, 5ಕೆಜಿ ಅಕ್ಕಿ ವಿತರಣೆ ಮಾಡಬೇಕು ಎಂದು ರೈತರು ನಮ್ಮಲ್ಲಿ ಮನವಿ ಮಾಡಿದ್ದಾರೆ. ಈ ಎಲ್ಲಾ ಮನವಿಗಳನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದರು.
ಈ ಹಿಂದೆ ಹಲವು ಯೋಜನೆಗಳಿಗೆ ನೀಡಲಾಗಿದ್ದ ಅನುದಾನಗಳನ್ನು ತಡೆಹಿಡಿದು ದ್ವೇಷದ ರಾಜಕಾರಣ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಈ ಸರ್ಕಾರ ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ಬೇಜವಾಬ್ದಾರಿತನ ತೋರುತ್ತಿದೆ. ಇದನ್ನ ವಿರೋಧ ಪಕ್ಷದ ನಾಯಕನಾಗಿ ನಾನು ಸಹಿಸುವುದಿಲ್ಲ. ಸರ್ಕಾರದ ಕಿವಿ ಹಿಂಡಿ ರಾಜ್ಯದ ಅಭಿವೃದ್ಧಿ ಮಾಡುವಂತೆ ಎಚ್ಚರಿಸಲಾಗುತ್ತದೆ ಎಂದರು.
ಈ ವೇಳೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಡಿ.ರಾಜೇಶ್ವರಿ, ಬಿಜೆಪಿ ಮುಖಂಡ ಡಾ.ಕೆ.ಸುಧಾಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್, ನಗರಸಭೆ ಸದಸ್ಯ ಬಂತಿವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…