ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಬಿಜೆಪಿ ಅಭ್ಯರ್ಥಿಗಳಾಗಿ ಇಬ್ಬರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
ರಾಜಸ್ಥಾನದಿಂದ ಮೂರು ಸ್ಥಾನಗಳಲ್ಲಿ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾದ ಚುನ್ನಿ ಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಅವರನ್ನು ರಾಜ್ಯಸಭೆಯ ಚುನಾವಣಾಧಿಕಾರಿ ಮಹಾವೀರ ಪ್ರಸಾದ್ ಶರ್ಮಾ ಅವರು ಆಯ್ಕೆ ಮಾಡಿದ್ದಾರೆ. ರಾಜಸ್ಥಾನದ ಎಲ್ಲಾ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.