ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸ್ಪರ್ಧಿಸಲು ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ

ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಸ್ಥಾನದಿಂದ ಸ್ಪರ್ಧಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಸೋನಿಯಾ ಗಾಂಧಿ ಅವರು 1999 ರಿಂದ ನಿರಂತರವಾಗಿ ಲೋಕಸಭಾ ಸದಸ್ಯರಾಗಿದ್ದಾರೆ. ಪ್ರಸ್ತುತ ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಅಮೇಥಿಯ ಲೋಕಸಭಾ ಸದಸ್ಯರೂ ಸಹ ಆಗಿದ್ದಾರೆ. ಪ್ರಥಮ ಬಾರಿಗೆ ಸಂಸತ್ತಿನ ಮೇಲ್ಮನೆಗೆ ಹೋಗಲು ನಿರ್ಧಾರ ಮಾಡಿದ್ದಾರೆ.

ಫೆಬ್ರವರಿ 8 ರಿಂದಲೇ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಫೆಬ್ರವರಿ 16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಹೆಸರನ್ನು ಫೆಬ್ರವರಿ 20 ರವರೆಗೆ ಹಿಂಪಡೆಯಲು ಅವಕಾಶವಿದೆ. ಫೆ.27ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5ರಿಂದ ಮತ ಎಣಿಕೆ ನಡೆಯಲಿದೆ.

Leave a Reply

Your email address will not be published. Required fields are marked *