ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಭಾರೀ ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಬೇಕು ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.
ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು, ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯಬೇಕು ಎಂದು ಹೇಳಿದ್ದಾರೆ.
ಸದ್ಯ ತೆಗೆದುಕೊಂಡಿರುವ ಕ್ರಮಗಳು:
* ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.
* ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳಾಗಿ ಗುರುತಿಸಲಾಗಿದೆ.
* ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.
* ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.973 ಕೋಟಿ ಅನುದಾನ ಲಭ್ಯವಿದೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…