ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆ ನಡೆಸಿ, ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.
ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯ ಮುಖ್ಯಾಂಶಗಳು:
• ಕಳೆದ ವರ್ಷ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38,793 ಕೋಟಿ ಬಿಡುಗಡೆಯಾಗಿದ್ದು, ರೂ. 38,717ಕೋಟಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ. ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ರೂ. 880 ಕೋಟಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು.
• ಎಸ್‌ಸಿಎಸ್‌ಪಿ/ ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6 ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ.
• ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ 2019-20ರ ಅವಧಿಯಲ್ಲಿ ನಿಗದಿತ ಶೇಕಡಾಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು.
• ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ಅನುದಾನದ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ.
• ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು.
• ಈ ವರ್ಷ ರೂ. 42,017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು.
• ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್ ಮೊದಲ ವಾರದಿಂದ ಪುನರ್ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
• ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ.
• ದೇವದಾಸಿಯರೂ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ
• ಕರ್ನಾಟಕದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಲಕ್ಷ ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ.
• ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು.
• ಕಳೆದ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1,086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು.
ಈ ವೇಳೆ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…