ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದ ಜೊತೆಗೆ ಸರ್ಕಾರದ ಎರಡು ವರ್ಷದ ಸಾಧನ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ಸೇರಿದಂತೆ ಹಲವು ಸಚಿವರು, ಶಾಸಕರು ಆಗಮಿಸಿ ಚಾಲನೆ ನೀಡಲಿದ್ದಾರೆ.
ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ಘನ ಉಪಸ್ಥಿತಿ, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ ಪಾಟೀಲ್, ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಶೇಷ ಉಪಸ್ಥಿತಿ ಇರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರು ರಾಮಲಿಂಗಾ ರೆಡ್ಡಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಎಂ.ಬಿ ಪಾಟೀಲ್, ಆಹಾರ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವರು ಡಾ. ಎಚ್.ಸಿ ಮಹಾದೇವಪ್ಪ, ಲೋಕೋಪಯೋಗಿ ಸಚಿವರು ಸತೀಶ್ ಜಾರಕಿಹೊಳಿ, ಕಂದಾಯ ಸಚಿವರು ಕೃಷ್ಣ ಬೈರೇಗೌಡ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಪ್ರಿಯಾಂಕಾ ಖರ್ಗೆ, ಕೃಷಿ ಮಾರುಕಟ್ಟೆ ಸಚಿವರು ಶಿವಾನಂದ ಪಾಟೀಲ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರು ಜಮೀರ್ ಅಹ್ಮದ್ ಖಾನ್, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮೆ ಸಚಿವರು ಶರಣ ಬಸಪ್ಪ ದರ್ಶನಾಪುರ, ಅರಣ್ಯ ಇಲಾಖೆ ಸಚಿವರು ಈಶ್ವರ ಖಂಡ್ರೆ, ಕೃಷಿ ಸಚಿವರು ಎನ್. ಚಲುವರಾಯಸ್ವಾಮಿ, ತೋಟಗಾರಿಕೆ ಇಲಾಖೆ ಸಚಿವರು ಎಸ್.ಎಸ್ ಮಲ್ಲಿಕಾರ್ಜುನ, ಪೌರಾಡಳಿತ ಮತ್ತು ಹಜ್ ಇಲಾಖೆ ಸಚಿವರು ರಹೀಂ ಖಾನ್, ಕಾರ್ಮಿಕ ಸಚಿವರು ಸಂತೋಷ ಲಾಡ್, ವೈದ್ಯಕೀಯ ಶಿಕ್ಷಣ ಸಚಿವರು ಡಾ. ಶರಣ ಪ್ರಕಾಶ್ ಪಾಟೀಲ್, ರೇಷ್ಮೆ ಇಲಾಖೆ ಸಚಿವರು ಕೆ. ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಸಚಿವರು ತಂಗಡಗಿ ಶಿವರಾಜ್ ಸಂಗಪ್ಪ, ಸಾಂಖ್ಯೀಕ ಇಲಾಖೆ ಸಚಿವರು ಡಿ. ಸುಧಾಕರ, ಸಹಕಾರ ಇಲಾಖೆ ಸಚಿವರು ಕೆ.ಎನ್ ರಾಜಣ್ಣ, ನಗರಾಭಿವೃದ್ಧಿ ಸಚಿವರು ಬಿ.ಎಸ್ ಸುರೇಶ್, ಒಳನಾಡು ಜಲಸಾರಿಗೆ ಸಚಿವರು ಮಂಕಾಳ ಎಸ್. ವೈದ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಲಕ್ಷ್ಮೀ ಹೆಬ್ಬಾಳ್ಕರ್, ಶಾಲಾ ಶಿಕ್ಷಣ ಸಚಿವರು ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರು ಎಮ್.ಸಿ ಸುಧಾಕರ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರು ಎನ್.ಎಸ್ ಬೋಸರಾಜು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಶರತ್ ಕುಮಾರ್ ಬಚ್ಚೆಗೌಡ, ವಿರೋಧ ಪಕ್ಷದ ನಾಯಕರು ಆರ್. ಅಶೋಕ್, 5ನೇ ಹಣಕಾಸು ಆಯೋಗದ ಅಧ್ಯಕ್ಷರು ಸಿ.ನಾರಾಯಣಸ್ವಾಮಿ ಅವರು ಗೌರವ ಉಪಸ್ಥಿತಿ ಇರಲಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…